Advertisement

ಡೆಂಘೀ ನಿಯಂತ್ರಣಕ್ಕೆ ಸಹಕರಿಸಿ: ಹಂದ್ರಾಳ್‌

04:09 PM May 25, 2018 | |

ಬಳ್ಳಾರಿ: ರಾಷ್ಟ್ರೀಯ ಡೆಂಘಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾ ಕಚೇರಿ ಆಶ್ರಯದಲ್ಲಿ ಜಾಗೃತಿ ಜಾಥಾ ಗುರುವಾರ ನಡೆಯಿತು.

Advertisement

ನಗರದ ಜಿಲ್ಲಾಸ್ಪತ್ರೆಯ ಕಚೇರಿ ಆವರಣದಲ್ಲಿರುವ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಆರಂಭವಾದ ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್‌.ಬಿ.ಹಂದ್ರಾಳ್‌ ಚಾಲನೆ ನೀಡಿದರು. 

ಈ ವೇಳೆ ಮಾತನಾಡಿದ ಎಸ್‌.ಬಿ.ಹಂದ್ರಾಳ್‌, ಸಾರ್ವಜನಿಕರು ಡೆಂಘಿ ರೋಗ ನಿಯಂತ್ರಣಕ್ಕೆ ಸಹಕರಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಜಿ.ರಮೇಶ್‌ಬಾಬು ಮಾತನಾಡಿ, ಡೆಂಘಿ ಜ್ವರ ಬಾರದಂತೆ ಸಾರ್ವಜನಿಕರು ಮುಂಜಾಗ್ರತಾ ಹಾಗೂ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿದರು. 

ಡೆಂಘಿ ಜ್ವರ ವೈರಸ್‌ನಿಂದ ಉಂಟಾಗುವ ಕಾಯಿಲೆ. ಇದು ಸೋಂಕು ಹೊಂದಿದ ಈಡೀಸ್‌ ಈಜಿಪ್ಟೆ„ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಯು ಸಾಮಾನ್ಯವಾಗಿ ಸ್ವತ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತದೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡರೆ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ
ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕೆಂದು ಸಲಹೆ ನೀಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಓಂ ಪ್ರಕಾಶ್‌ ಕೆ.ಕಟ್ಟಿಮನಿ ಮಾತನಾಡಿ, ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣು ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು
ಬರುವುದು ಡೆಂಘಿ ರೋಗದ ಲಕ್ಷಣಗಳಾಗಿವೆ. ಡೆಂಘಿ ಜ್ವರದ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಎನ್‌.ಬಸರೆಡ್ಡಿ, ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ| ವೆಂಕಟೇಶ್‌ಮೂರ್ತಿ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳಾದ ಡಾ| ಹನುಮಂತಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಕಾರಿ ಡಾ| ಎಚ್‌ .ನಿಜಾಮುದ್ದೀನ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಎಚ್‌.ಎಂ.ರವೀಂದ್ರನಾಥ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಅನಿಲ್‌ ಕುಮಾರ್‌, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ರಾಜಶೇಖರ್‌ರೆಡ್ಡಿ, ಡಾ| ಕಾಶಿ ಪ್ರಸಾದ್‌, ಡಾ| ಲಕ್ಷೀಕಾಂತ, ದುರುಗೇಶ್‌ ಮಾಚನೂರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಈಶ್ವರ ದಾಸಪ್ಪನವರ, ಕೃಷ್ಣಾನಾಯಕ್‌, ವಿಬಿಡಿಸಿ ಕನ್ಸಲ್ಟೆಂಟ್‌ ಎಚ್‌.ಪ್ರತಾಪ್‌, ಹಿರಿಯ ಆರೋಗ್ಯ ಸಹಾಯಕರಾದ ವೀರೇಶ್‌ ಗವಿಮಠ, ಯು. ಬಸವರಾಜ, ಶಕುಂತಲಾ ಮ್ಯಾಳಿ, ಕೆ.ಮಲ್ಲಪ್ಪ, ಕಿರಿಯ ಆರೋಗ್ಯ ಸಹಾಯಕರಾದ ಶಕೀಲ್‌ ಅಹ್ಮದ್‌, ಮುಸ್ತಾಕ್‌ ಅಹ್ಮದ್‌, ಚಿದಾನಂದ, ಮರಿಬಸವನಗೌಡ ಚಾನಾಳ್‌, ಕೆ.ಎಸ್‌. ಮಲ್ಲಿಕಾರ್ಜುನ ಹಾಗೂ ಜಿಲ್ಲಾ ವಿಬಿಡಿಸಿ ಸಿಬ್ಬಂದಿ ವರ್ಗದವರು, ಕಿಮಆಸ ತರಬೇತಿ ಕೇಂದ್ರದ ಎಲ್ಲಾ ಪ್ರಶಿಕ್ಷಣಾರ್ಥಿಗಳು, ನಗರ
ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಜಾಥಾ ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next