Advertisement
ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಪುತ್ತೂರು ಇಂಟಕ್ ಪದಗ್ರಹಣ ಸಮಾರಂಭವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರು ದೇಶದ ಬೆನ್ನೆಲುಬು. ಅವರ ದುಡಿಮೆಯ ಶ್ರಮದಲ್ಲಿ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತಾ ಬಂದಿದೆ.ಇಂಥ ಕಾರ್ಮಿಕ ವರ್ಗಕ್ಕೆ ಉತ್ತಮ ಭವಿಷ್ಯ ಸಿಕ್ಕರೆ ದೇಶದ ಭವಿಷ್ಯವೂ ಉಜ್ವಲವಾಗುತ್ತದೆ ಎಂದರು.
ಕಾರ್ಮಿಕರು ತಾವು ಪರಿಶ್ರಮದಿಂದ ದುಡಿದು ಸ್ವಾವಲಂಬಿಗಳಾಗಬೇಕು. ಇನ್ನೊಂದಿಷ್ಟು ಕಾರ್ಮಿಕರ ಬದುಕಿಗೆ ದಾರಿದೀಪ ಆಗುವ ರೀತಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಇದರಿಂದ ಇಡೀ ಕಾರ್ಮಿಕ ಸಮುದಾಯದ ಕಲ್ಯಾಣ ಸಾಧ್ಯವಾಗುತ್ತದೆ ಎಂದರು. ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಅವರು ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಕುರಿತಾದ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, 3.30 ಕೋಟಿ ಸದಸ್ಯರು ಇಂಟಕ್‌ನಲ್ಲಿದ್ದು, ಇಡೀ ವಿಶ್ವದಲ್ಲೇ ಇಷ್ಟು ಸಂಖ್ಯೆಯ ಸದಸ್ಯರನ್ನು ಹೊಂದಿರುವ ಮತ್ತೂಂದು ಕಾರ್ಮಿಕ ಸಂಘಟನೆ ಇಲ್ಲ. ದೇಶದ ಬಲಿಷ್ಠ ಕಾರ್ಮಿಕ ಸಂಘಟನೆಯಾಗಿ ಬೆಳೆದು ನಿಂತಿರುವ ಇಂಟಕ್ ನಾಡಿನ ಮೂಲೆ ಮೂಲೆಯಲ್ಲಿ ಕಾರ್ಮಿಕರನ್ನು ಸಂಘಟಿಸುವ ಮತ್ತು ಅವರಿಗೆ ಯೋಗ್ಯ ಸೌಲಭ್ಯಗಳನ್ನು ಒದಗಿಸಿ ಕೊಡುವ ಕೆಲಸ ಮಾಡುತ್ತಾ ಬಂದಿದೆ ಎಂದರು.
Related Articles
Advertisement
ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ,ಇಂಟಕ್ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ, ಪ್ರಮುಖರಾದ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಲಕ್ಷ್ಮಣ ಬೈಲಾಡಿ, ಜೋಕಿಂ ಡಿ’ಸೋಜಾ, ಯು.ಟಿ. ತೌಸಿಫ್, ದೀಕ್ಷಿತ್ ಶೆಟ್ಟಿ, ಸ್ಟೀವನ್ ಡಿ’ಸೋಜಾ ಉಪಸ್ಥಿತರಿದ್ದರು. ದಿಲೀಪ್ ಕುಮಾರ್ ಮೊಟ್ಟೆತ್ತಡ್ಕ ಪ್ರಾರ್ಥಿಸಿದರು. ತಾಲೂಕು ಇಂಟಕ್‌ನ ನೂತನ ಅಧ್ಯಕ್ಷ ಜಯಪ್ರಕಾಶ್ ಬದಿನಾರು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ರಫಿಕ್ ಎಂ. ಕೆ. ವಂದಿಸಿದರು. ನಿರಂಜನ ರೈ ಮಠಂತಬೆಟ್ಟು ನಿರ್ವಹಿಸಿದರು.