Advertisement

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

12:41 PM Jul 09, 2022 | Team Udayavani |

ಬೆಂಗಳೂರು: ಶುಕ್ರವಾರ ಸಂಜೆ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ.

Advertisement

ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ.‌ 080-1070, 22340676, ಇಮೇಲ್: incomedmkar@gmail.com

ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ ಭಕ್ತರು ವಾಸ್ತವ್ಯ ಹೂಡಿದ್ದ ಟೆಂಟ್‌ಗಳು ಮತ್ತು ಸಮುದಾಯ ಅಡುಗೆ ಮನೆಯತ್ತ ನುಗ್ಗಿ ಬಂದಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೇತೃತ್ವದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರೆಣೆ ನಡೆಸಲಾಗುತ್ತಿದೆ.

ಸಿಎಂ ಕಂಬನಿ: ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಅರ್ಜಿ; ಸುಪ್ರೀಂ ಮೆಟ್ಟಿಲೇರಿದ ಉದ್ಧವ್‌ ಠಾಕ್ರೆ

Advertisement

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ಮೇಘ ಸ್ಫೋಟದಿಂದಾಗಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಮೇಘ ಸ್ಫೋಟದಲ್ಲಿ ಜೀವ ಕಳೆದುಕೊಂಡ ಜನರ ಆತ್ಮಗಳಿಗೆ ಶಾಂತಿ ಸಿಗಲಿ. ಇವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದವರಿಗೆ ನೀಡಲಿ ಎಂದು ಟ್ರೀಟ್ ನಲ್ಲಿ ಪ್ರಾರ್ಥಿಸಿದ್ದಾರೆ.

ಸಹಾಯವಾಣಿಯ ವಿವರ:

ಎನ್.ಡಿ.ಆರ್.ಎಫ್: 011-23438252, 011-23438253

ಕಶ್ಮೀರ್ ಡಿವಿಷನಲ್ ಹೆಲ್ಪ್ ಲ್ಲೈನ್: 0914- 2496240

ದೇವಸ್ಥಾನ ಮಂಡಳಿಯ ಸಹಯಾವಾಣಿ: 0194-2313149

ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070, 22340676

ಸಹಾಯವಾಣಿ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next