Advertisement
ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಯುವಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಹೆಲ್ಪ್ಲೈನ್ ಅನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಾಗೂ ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ 100 ವಕೀಲರ ತಂಡವು ಸಹಾಯವಾಣಿ ರಚಿಸಿದೆ. ಸದನದ ಒಳಗೆ ಮತ್ತು ಹೊರಗೆ ಸರಕಾರ ನಡೆಸುವ ದೌರ್ಜನ್ಯದ ವಿರುದ್ಧ ಹೋರಾಟ ಸಂಘಟಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
Related Articles
Advertisement
ರಾಜ್ಯ ಸಮಿತಿ ಸದಸ್ಯ ವಸಂತಕುಮಾರ್, ಹೆಲ್ಲೈನ್ ಸಮನ್ವಯಕಾರ ಸಂದೀಪ್ ರವಿ ಉಪಸ್ಥಿತರಿದ್ದರು.
ಹಬ್ಬಗಳ ಮೆರವಣಿಗೆಗೂ ಅವಕಾಶ ಇಲ್ಲ: ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಸಂವಿಧಾನದಲ್ಲಿ ರಾಜಕೀಯ ಪಕ್ಷಕ್ಕೆ ಕೊಟ್ಟ ಅವಕಾಶದಂತೆ ನಡೆದುಕೊಂಡರೂ ಸುಳ್ಳು ಕೇಸು ಹಾಕಿದ್ದರು. ಗಣಪತಿ ಹಬ್ಬ, ಯುಗಾದಿ, ರಾಮನವಮಿ, ಹನುಮ ಜಯಂತಿಯ ಸಂದರ್ಭದಲ್ಲೂ ಕೋರ್ಟಿಗೆ ಹೋಗಿ ಅನುಮತಿ ಪಡೆದು ರ್ಯಾಲಿ, ಮೆರವಣಿಗೆ, ಶೋಭಾಯಾತ್ರೆ ಮಾಡಬೇಕಾದ ಪರಿಸ್ಥಿತಿ ಬಂದಿತ್ತು. ಫೇಸ್‌ಬುಕ್‌ನಲ್ಲಿ ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಟೀಕಿಸಿ ಪೋಸ್ಟ್ ಹಾಕಿದ ಕಾರಣಕ್ಕೆ ಕೇಸು ಹಾಕಿಸಿ ಅವರನ್ನು ಬಂಧಿಸಲಾಗುತ್ತಿತ್ತು. ವಾಟ್ಸಾಪ್, ಕಾಟೂìನ್, ಮೀಮ್ ಹಂಚಿಕೊಂಡಾಗ ಬಂಧಿಸಲಾಗಿತ್ತು ಎಂದು ತೇಜಸ್ವಿ ಸೂರ್ಯ ಆರೋಪಿಸಿದರು.