Advertisement

ಸಾರಿಗೆ ಇಲಾಖೆಯಿಂದ ಸಹಾಯವಾಣಿ ಪ್ರಾರಂಭ: ಡಿಸಿಎಂ ಲಕ್ಷ್ಮಣ ಸವದಿ

11:32 AM May 31, 2021 | Team Udayavani |

ಬೆಂಗಳೂರು: ಕೋವಿಡ್ ಪಿಡುಗನ್ನು ತಡೆಯುವ ಪ್ರಯತ್ನದ ಅಂಗವಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Advertisement

ಸಾರಿಗೆ ಸೇವೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಅಥವಾ ಕುಂದು ಕೊರತೆಗಳಿದ್ದಲ್ಲಿ ಸಾರ್ವಜನಿಕರು ಸಹಾಯವಾಣಿಯ 9449 86 3214 ಸಂಖ್ಯೆಗೆ ಸಂಪರ್ಕಿಸಿ ಉಪಯೋಗ ಪಡೆದುಕೊಳ್ಳಬಹುದು ಎಂದು ಸವದಿ ತಿಳಿಸಿದ್ದಾರೆ.

ಕೋವಿಡ್ ರೋಗದಿಂದ ತೊಂದರೆಗೆ ಒಳಗಾಗಿರುವ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಂಬುಲೆನ್ಸ್ ಸೇವೆಗೂ ಸರ್ಕಾರ ಸೂಕ್ತ ದರವನ್ನು ನಿಗದಿಪಡಿಸಿದ್ದು, ಆ ಪ್ರಕಾರವೇ ಅಂಬುಲೆನ್ಸ್ ಸೇವೆಗೆ ಅಂಬುಲೆನ್ಸ್ ವಾಹನಗಳ ಮಾಲೀಕರು ದರ ವಿಧಿಸಬೇಕಾಗಿದೆ.  ಆದರೆ ಕೆಲವು ಪ್ರಕರಣಗಳಲ್ಲಿ  ಅಂಬುಲೆನ್ಸ್ ಸೇವೆಗೆ ಸಾರ್ವಜನಿಕರಿಂದ ಅಧಿಕ ಶುಲ್ಕ ಸಂಗ್ರಹಿಸುತ್ತಿರುವ ಆರೋಪಗಳು ವ್ಯಕ್ತವಾಗಿವೆ. ಇದು ಸರಿಯಲ್ಲ. ಒಂದು ವೇಳೆ ಸರ್ಕಾರದ ನಿಗದಿಪಡಿಸಿರುವ ದರಕ್ಕಿಂತಲೂ ಹೆಚ್ಚು ಹಣವನ್ನು ಯಾರೇ ಸಂಗ್ರಹಿಸಿ ನಿಯಮ ಉಲ್ಲಂಘಿಸಿದರೂ  ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಸವದಿ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next