Advertisement
ಜೂ.12ರಂದು ಕುಕ್ಕಿಕಟ್ಟೆಯ ಶ್ರೀ ಕೃಷ್ಣಬಾಲನಿಕೇತನದಲ್ಲಿ ಜರಗಿದ ಅಂತಾರಾಷ್ಟ್ರೀಯ ಬಾಲಕಾರ್ಮಿಕರ ದಿನಾಚರಣೆ ಮತ್ತು ಮಕ್ಕಳ ಸಹಾಯವಾಣಿ ಸಿಬಂದಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋಲಾರ ಹೊರತುಪಡಿಸಿದರೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಕ್ಕಳ ಸಹಾಯವಾಣಿ ಆರಂಭಗೊಂಡಿದೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 2,500 ಕರೆಗಳು ಬಂದಿವೆ ಎಂದು ಪ್ರೋಗ್ರಾಂ ಕೋ-ಆರ್ಡಿನೇಟರ್‌ಚಿತ್ರಾ ತಿಳಿಸಿದರು.
Related Articles
ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾವೇರಿ ಲೇಲೆ ಉಪಸ್ಥಿತರಿದ್ದರು. ಚೈಲ್ಡ್ ಲೈನ್ ಫೌಂಡೇಷನ್‌ನ ಅಯ್ಯಪ್ಪನ್ ವಂದಿಸಿದರು. ರಾಮಾಂಜಿ ಅವರನ್ನು ಸಮ್ಮಾನಿಸಲಾಯಿತು. ನಾರಾಯಣ ಬಿ.ಕೆ. ಸಮ್ಮಾನಿತರನ್ನು ಪರಿಚಯಿಸಿದರು.
Advertisement
ರೈಲ್ವೇ ನಿಲ್ದಾಣಗಳಲ್ಲಿಯೂ ಚೈಲ್ಡ್ ಹೆಲ್ಪ್ ಡೆಸ್ಕ್ಬೆಂಗಳೂರು ಸೇರಿದಂತೆ ದೇಶದ 94 ರೈಲ್ವೇ ನಿಲ್ದಾಣಗಳಲ್ಲಿ ಚೈಲ್ಡ್ ಹೆಲ್ಪ್ ಡೆಸ್ಕ್ ಆರಂಭಿಸಲಾಗಿದೆ. ನಾನಾ ರೀತಿಯ ದೌರ್ಜನ್ಯಗಳಿಗೆ ಒಳಗಾಗಿ ರೈಲ್ವೇ ನಿಲ್ದಾಣಕ್ಕೆ ಬಂದಿರುವ ಮಕ್ಕಳ ರಕ್ಷಣೆಗಾಗಿ ಇದು ಕೆಲಸ ಮಾಡುತ್ತಿದೆ ಎಂದು ಚೈಲ್ಡ್ ಲೈನ್ ಇಂಡಿಯಾ ಫೌಂಡೇಶನ್‌ನ ದಕ್ಷಿಣ ವಲಯದ ಸೀನಿಯರ್ ಪ್ರೋಗ್ರಾಂ ಕೋ-ಆರ್ಡಿನೇಟರ್ ಚಿತ್ರಾ ಅಂಚನ್ ಹೇಳಿದರು. ಸಮನ್ವಯತೆ ಅಗತ್ಯ: ಎಸ್‌ಪಿ
ಮಕ್ಕಳ ರಕ್ಷಣೆ ಕಾರ್ಯಯಶಸ್ವಿಯಾಗಬೇಕಾದರೆ ಇದಕ್ಕೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದು ಅವಶ್ಯ. ತುರ್ತು ಸಂದರ್ಭಗಳಲ್ಲಿ ಮಗುವಿನ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು. ಅನಂತರವಷ್ಟೇ ಕಚೇರಿಯ ಇತರ ಕೆಲಸಗಳತ್ತ ಗಮನ ಹರಿಸಬೇಕು ಎಂದು ಎಸ್‌ಪಿ ನಿಶಾ ಜೇಮ್ಸ್ ಹೇಳಿದರು.