Advertisement

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

06:02 PM Nov 28, 2024 | Team Udayavani |

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರು ಗುರುವಾರ(ನ28) ಪ್ರಮಾಣ ವಚನ ಸ್ವೀಕಾರ ಮಾಡಿದರು.ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ INDIA bloc ನ ಹಲವು ನಾಯಕರು ಭಾಗಿಯಾಗಿ ಕಾರ್ಯಕ್ರಮವನ್ನು ಏಕತೆಯ ಪ್ರದರ್ಶನವಾಗುವಂತೆ ಮಾಡಿದರು.

Advertisement

ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯಿತು. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಿದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಬಿಹಾರದ ವಿಪಕ್ಷ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗಿಯಾಗಿದ್ದರು.

ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರಂಭದಲ್ಲಿ ಭಾಗಿಯಾದರು. ಸುದ್ದಿಗಾರರೊಂದಿಗೆ ಮಾತನಾಡಿ “ಇದು ಜಾರ್ಖಂಡ್‌ಗೆ ಉತ್ತಮ ದಿನ, ಜನರು ಹೆಚ್ಚಿನ ವಿಶ್ವಾಸವನ್ನು ತೋರಿಸಿದ್ದಾರೆ, ಇಡೀ ಮೈತ್ರಿಕೂಟವು ಉತ್ತಮ ಕೆಲಸ ಮಾಡುತ್ತದೆ ಎಂದು ನನಗೆ ಖಾತ್ರಿಯಿದೆ. ಬಿಜೆಪಿಯವರು ಕಿರುಕುಳ ನೀಡಲು ಪ್ರಯತ್ನಿಸಿದ್ದರಿಂದ ಇದು ಒಂದು ದೊಡ್ಡ ಪಾಠವಾಗಿದೆ, ಕರ್ನಾಟಕದ ನಂತರ ಇದು ಒಂದು ಉದಾಹರಣೆಯಾಗಿದೆ’ ಎಂದರು.

ಜಾರ್ಖಂಡ್ ಮುಕ್ತಿ ಮೋರ್ಚಾ ವು ಕಾಂಗ್ರೆಸ್, ಆರ್‌ಜೆಡಿ ಮತ್ತು ಸಿಪಿಐ-ಎಂಎಲ್‌ನೊಂದಿಗೆ ಮೈತ್ರಿ ಮಾಡಿಕೊಂಡು 81 ವಿಧಾನಸಭಾ ಸ್ಥಾನಗಳಲ್ಲಿ 56 ಸ್ಥಾನಗಳನ್ನು ಪಡೆದುಕೊಂಡು ಅಭೂತಪೂರ್ವ ಜಯ ಸಾಧಿಸಿ ಸರಕಾರ ರಚಿಸಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next