ನವದೆಹಲಿ: ಭೂ ಹಗರಣ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಜೈಲಿನಲ್ಲಿದ್ದ ಹೇಮಂತ್ ಸೊರೇನ್ ಬುಧವಾರ (ಜುಲೈ 03) ಬಿಡುಗಡೆಯಾಗಲಿದ್ದು, ಮತ್ತೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ
ಜಾರ್ಖಂಡ್ ನಲ್ಲಿ ಸಿಎಂ ಬದಲಾವಣೆ ಕುರಿತು INDIA ಮೈತ್ರಿಯ ಶಾಸಕರು ಮತ್ತು ಮುಖಂಡರು ಚರ್ಚೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬಂದಿರುವುದಾಗಿ ಮೂಲಗಳು ಹೇಳಿವೆ. ಭೂ ಹಗರಣದಲ್ಲಿ ಹೇಮಂತ್ ಸೊರೇನ್ ಕಳೆದ ಐದು ತಿಂಗಳು ಕಾಲ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿದ್ದರು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್ ಸೊರೇನ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಚಂಪೈ ಸೊರೇನ್ ಇಂದು ರಾತ್ರಿ 8 ಗಂಟೆ ಸುಮಾರಿಗೆ ಜಾರ್ಖಂಡ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.
ರಾಂಚಿಯಲ್ಲಿರುವ ಸಿಎಂ ನಿವಾಸದಲ್ಲಿ ಇಂಡಿಯಾ ಬ್ಲಾಕ್ ಮುಖಂಡರು ಮಾತುಕತೆ ನಡೆಸಿದ್ದರು. ಇದೀಗ ಹೇಮಂತ್ ಸೊರೇನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 2000ನೇ ಇಸವಿಯಲ್ಲಿ ಬಿಹಾರದಿಂದ ಪ್ರತ್ಯೇಕಗೊಂಡ ನಂತರ ಹೇಮಂತ್ ಜಾರ್ಖಂಡ್ ನ 13ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.