Advertisement

ಮೇ 16ಕ್ಕೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

12:10 PM May 05, 2017 | |

ಮೈಸೂರು: ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ  ಮೇ 16ರಂದು ಶಿವಶರಣೆ ವåಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಗುವುದು ಎಂದು ಮೈಸೂರು ಉಪ ವಿಭಾಗಾಧಿಕಾರಿ ಸಿ.ಎಲ್‌. ಆನಂದ್‌ ಹೇಳಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಮಹಾನ್‌ ವ್ಯಕ್ತಿಗಳು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲು ಹಾಗೂ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ವಿವಿಧ ಜಯಂತಿಗಳನ್ನು ಆಚರಿಸುತ್ತದೆ.

ಮೇ 16ರಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿರುವ ಶಿವಶರಣೆ ವåಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಹೆಚ್ಚಿನ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದರು. ಜಯಂತಿಗಳಲ್ಲಿ ವಿದ್ಯಾಭ್ಯಾಸ, ಉದ್ಯೋಗ, ಸಮಾಜದಲ್ಲಿರುವ ತೊಂದರೆಗಳ ಬಗ್ಗೆ ಚರ್ಚಿಸಬೇಕು. ಸಣ್ಣ ಸಮುದಾಯಗಳು ಸಹ ಸರ್ಕಾರದ ಯೋಜನೆಗಳ ಬಗ್ಗೆ ತಿಳಿದುಕೊಂಡು ಯೋಜನೆಗಳನ್ನು ಸದುಪಯೋಗಪಡಿಸಿ ಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಹೇಮರೆಡ್ಡಿ ಮಲ್ಲಮ್ಮ ಅವರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ಇಲ್ಲ ಇವರ ವಿಷಯ ಹಾಗೂ ಚಿಂತನೆಗಳನ್ನು ಸಂಗ್ರಹಿಸಿ ಕೈಪಿಡಿ ಸಿದ್ಧಪಡಿಸಿ ಜಯಂತಿಯ ದಿನದಂದು ವಿತರಿಸಲು ಕ್ರಮಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೇಳಿದರು.

ಜಯಂತಿಯ ದಿನದಂದು ವೇದಿಕೆ ಕಾರ್ಯಕ್ರಮ ಪ್ರಾರಂಭವಾಗುವುದಕ್ಕೂ ಕಲಾ ಮಂದಿರದ ಮುಂಭಾಗದಲ್ಲಿ ಕಲಾತಂಡಗಳಿಂದ ಮೆರವಣಿಗೆ ವೇದಿಕೆಯಲ್ಲಿ ವಚನ ಗಾಯನ ಕಾರ್ಯಕ್ರಮ ಹಾಗೂ ಉದ್ಘಾಟನೆಯ ನಂತರ ಉಪನ್ಯಾಸ ಕಾರ್ಯಕ್ರಮ ಆಯೋಜಿಸ ಲಾಗುವುದು ಎಂದರು.

Advertisement

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚನ್ನಪ್ಪ, ಕನ್ನಡ ಚಳವಳಿ ನಾಯಕ ತಾಯೂರು ವಿಠಲಮೂರ್ತಿ, ಕರುನಾಡ ಸರ್ವೋದಯ ಸೇನೆಯ ಅಧ್ಯಕ್ಷ ಸಿ.ವಿ.ರವಿಶಂಕರ್‌, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಕೆ.ಜೆ. ನಾರಾಯಣ ಕಿಕ್ಕೇರಿ, ಪರಮೇಶ್ವರಯ್ಯ, ಡಾ. ಜಿ.ಎಂ. ವಾಮದೇವ್‌, ಬಿ. ವಿಶ್ವನಾಥ್‌ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next