Advertisement

ಕತ್ತು ಬಿಗಿದು ಪತ್ನಿಯ ಕೊಂದ ಪತಿ ಪರಾರಿ

11:23 AM Nov 18, 2017 | Team Udayavani |

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಪತ್ನಿಯ ಕುತ್ತಿಗೆ ಬಿಗಿದು ಪತಿಯೇ ಕೊಲೆಗೈದಿರುವ ಘಟನೆ ಕಾಡುಗೋಡಿ ಪೊಲೀಸ್‌ ಠಾಣ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಲಲಿತಾ (25) ಮೃತರು. ಕೃತ್ಯವೆಸಗಿದ ಪತಿ ಮಣಿ ಪರಾರಿಯಾಗಿದ್ದಾನೆ. ಕೋಲಾರ ಮೂಲದ ಲಲಿತಾ ಗಾರೆ ಕೆಲಸದ ಮೆಸಿŒ ಮಣಿ ಎಂಬಾತನನ್ನು 9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

Advertisement

ಮೂರು ತಿಂಗಳ ಹಿಂದಷ್ಟೇ ಕೊಡಿಗೆಹಳ್ಳಿಯಲ್ಲಿ ಪತಿ ಮಕ್ಕಳೊಂದಿಗೆ ಬಂದು ನೆಲೆಸಿದ್ದರು. ಈ ಮಧ್ಯೆ ಸಾಮಾನ್ಯವಾಗಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಮತ್ತು ಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ, ಯಾವ ಕಾರಣಕ್ಕೆ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಮನೆ ತೆಗೆದಿರುವುದನ್ನು ಕಂಡ ನೆರೆಹೊರೆಯ ಜನ ಒಳಗೆ ಹೋಗಿ ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಲಟ್ಟಣಿಗೆಯಲ್ಲಿ ತಲೆಯ ಮೇಲೆ ಬಲವಾಗಿ ಹೊಡೆದು, ನಂತರ ವೈರ್‌ನಲ್ಲಿ ಕುತ್ತಿಗೆ ಬಿಗಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸಿದಾಗ ಪತಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಪ್ರಕರಣ ಕಾಡುಗೋಡಿಯಲ್ಲಿ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next