ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಲಿದೆ.
ಸೋನಿಯಾ ಅವರೊಂದಿಗೆ ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ವಾದ್ರಾ ಇ.ಡಿ. ಕಚೇರಿಗೆ ಬರುವ ಸಾಧ್ಯತೆಗಳಿವೆ.
ಕೊರೊನಾ ಸೋಂಕಿನ ಹಿನ್ನೆಲೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡೇ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜು.21ರಂದು ಮೊದಲನೇ ಬಾರಿಗೆ ಇ.ಡಿ. ವಿಚಾರಣೆಗೆ ಹಾಜರಾಗಿದ್ದ ಸೋನಿಯಾ ಅವರಿಗೆ ಅಧಿಕಾರಿಗಳು ಒಟ್ಟು 28 ಪ್ರಶ್ನೆಗಳನ್ನು ಕೇಳಿದ್ದರು. ಒಟ್ಟು 2 ತಾಸುಗಳ ಕಾಲ ವಿಚಾರಣೆ ನಡೆಸಲಾಗಿತ್ತು.
ಪ್ರತಿಭಟನೆ: ಸೋನಿಯಾ ಗಾಂಧಿ ವಿಚಾರಣೆಯನ್ನು ವಿರೋಧಿಸಿರುವ ಕಾಂಗ್ರೆಸ್, ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಂಗಳವಾರ ಮೌನ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.