Advertisement
ಗ್ರಾಮದ ನಿವಾಸಿ ಲಕ್ಷ್ಮಣ (24) ಎಂಬಾತನೇ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿರುವ ಯುವಕ. ಈತ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದನು. ಗ್ರಾಮದಲ್ಲಿಯೇ ಎದುರು ಮನೆಯ ಬಾಲಕಿಯನ್ನು ಪ್ರೀತಿಸುವುದಾಗಿ ಹಾಗೂ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಪ್ರೀತಿಸುವಂತೆ ನಿವೇದಿಸಿಕೊಂಡಿದ್ದಾನೆ.
Related Articles
ಆಗ ಬಾಲಕಿಯನ್ನು ಪೋಷಕರು ಪ್ರಶ್ನೆ ಮಾಡಿದಾಗ ಗ್ರಾಮದ ಲಕ್ಷ್ಮಣ, ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಹೊಂದಿರುವುದಾಗಿ ಹೇಳಿದ್ದಾಳೆ. ತಕ್ಷಣ ಪೋಷಕರು ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Advertisement
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯ್ಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.