Advertisement

ವಾಟ್ಸಾಪ್ ಕಾಲ್ ಗಳನ್ನು ರೆಕಾರ್ಡ್ ಮಾಡುವುದು ಹೇಗೆ? ಇಲ್ಲಿದೆ ಟಿಪ್ಸ್

04:33 PM Oct 25, 2020 | Mithun PG |

ನವದೆಹಲಿ: ವಾಟ್ಸಾಪ್ ಭಾರತದಲ್ಲಿ ಜನಪ್ರಿಯ ಅಪ್ಲಿಕೇಶನ್. ಈ ಆ್ಯಪ್ ಮೂಲಕ ಮೆಸೇಜ್, ಕಾಲ್, ವಿಡಿಯೋ ಕರೆಗಳನ್ನು ಕೂಡ ಮಾಡಬಹುದು. ಆದರೇ ವಾಟ್ಸಾಪ್ ಕರೆಗಳನ್ನು ರೆಕಾರ್ಡ್ ಮಾಡಲು ಇಲ್ಲಿವರೆಗೂ ಯಾವುದೇ ಫೀಚರ್ ಗಳು ಬರಲಿಲ್ಲ. ಇದರಿಂದ ಹಲವು ಬಳಕೆದಾರರು ನಿರಾಶೆಗೊಳಗಾಗಿದ್ದರು.  ಆದರೇ ಈ ಸಮಸ್ಯೆಗೆ ಪರಿಹಾರ ಇಲ್ಲಿದೆ.

Advertisement

ಸಾಮಾನ್ಯವಾಗಿ ವಾಟ್ಸಾಪ್ ಕರೆ ಬಂದಾಗ ಸ್ಪೀಕರ್ ಆನ್ ಮಾಡಿ, ಇನ್ನೊಂದು ಮೊಬೈಲ್ ಮೂಲಕ ರೆಕಾರ್ಡ್ ಮಾಡಬಹುದು. ಆದರೇ ಇದಕ್ಕಾಗಿ ಎರಡು ಸ್ಮಾರ್ಟ್ ಫೋನ್ ಇರುವುದು ಅವಶ್ಯ. ಇದಿಲ್ಲದಿದ್ದರೇ ಥರ್ಡ್ ಪಾರ್ಟಿ ಆ್ಯಪ್ ಗಳಲ್ಲಿ ಒಂದಾದ “ವಾಯ್ಸ್ ರೆಕಾರ್ಡರ್” ಬಳಸಬಹುದು.

ಅದಾಗ್ಯೂ Otter.Ai app ಕೂಡ ವಾಯ್ಸ್ ರೆಕಾರ್ಡ್ ಗೆ ಪರಿಣಾಮಕಾರಿಯಾಗಿದ್ದು, ರೆಕಾರ್ಡ್ ಬಟನ್ ಕ್ಲಿಕ್ ಮಾಡುವ ಮೂಲಕ ವಾಟ್ಸಾಪ್  ಕರೆಗಳನ್ನು ದಾಖಲಿಸಿಕೊಳ್ಳಬಹುದು. ಈ ಆ್ಯಪ್ ನ ವಿಶೇಷತೆಯೆಂದರೇ ವಾಯ್ಸ್ ಕರೆಗಳು Text ಮಾದರಿಯಲ್ಲಿ ರೂಪಾಂತರಗೊಳ್ಳುತ್ತದೆ. ಇದರ ಮೂಲಕ ವಾಯ್ಸ್ ರೆಕಾರ್ಡ್ ಮಾತ್ರವಲ್ಲದೆ ಅದರ Text  ರೂಪಾಂತರವನ್ನು ಕೂಡ ಪಡೆಯಬಹುದು. ಗಮನಿಸಬೇಕಾದ ಅಂಶವೆಂದರೇ ಈ ಆ್ಯಪ್ ಕೇವಲ ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಲಭ್ಯವಿದೆ. ಇದರ ಮೂಲಕ ಪ್ರತಿ ತಿಂಗಳು ಉಚಿತವಾಗಿ 600 ನಿಮಿಷ ಕರೆಗಳನ್ನು ರೆಕಾರ್ಡ್ ಮಾಡಬಹುದು.

ಇದರ ಹೊರತಾಗಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಕೂಡ ಹಲವು ವಾಯ್ಸ್ ಕಾಲ್ ರೆಕಾರ್ಡ್ ಗಳು ಲಭ್ಯವಿದೆ. ಇದರಲ್ಲಿ “ರೆಕಾರ್ಡ್ ವಾಟ್ಸಾಪ್ ಕಾಲ್” ಅತ್ಯುತ್ತಮವಾಗಿ ಬಳಕೆ ಸ್ನೇಹಿಯಾಗಿದೆ. ಇದರಲ್ಲಿ ಅಟೋಮ್ಯಾಟಿಕ್ ಆಗಿ ವಾಟ್ಸಾಪ್ ಕರೆಗಳು ರೆಕಾರ್ಡ್ ಆಗುವುದು ಮಾತ್ರವಲ್ಲದೆ, ಗೂಗಲ್ ಡ್ರೈವ್ ಗೂ ಕೂಡ ಅಪ್ಲೋಡ್ ಆಗುವುದು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next