Advertisement
ನಿಮ್ಮ ಹೊಟ್ಟೆಯಲ್ಲಿ ಆಮ್ಲದ ಪ್ರಮಾಣವು ಹೆಚ್ಚುವುದರಿಂದ ಹೊಟ್ಟೆಯಲ್ಲಿ ಅಸಹನೀಯವಾಗಿ ಉರಿಯುವ ಸಂವೇದನೆ ಉಂಟಾಗಬಹುದು. ಈ ಕಾರಣದಿಂದಾಗಿಎದೆ ಉರಿ, ಹೊಟ್ಟೆ ಉಬ್ಬರಿಸುವುದು, ಅಜೀರ್ಣ, ಹೊಟ್ಟೆಯಲ್ಲಿರುವ ಆಹಾರಾಂಶಗಳ ಹಿಮ್ಮುಖ ಹರಿವು ಬಾಯಿಯ ಮೂಲಕ ಹೊರಬರುವುದು, ವಾಕರಿಕೆ ಮತ್ತು
ಬಾಯಿ ಹುಳಿ-ಹುಳಿಯಾವುದು ಇತ್ಯಾದಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆನುವಂಶಿಕತೆ, ಆಹಾರಕ್ರಮ, ಅಧಿಕ ಮದ್ಯಪಾನ ಮತ್ತು ಅಸಹಜವಾಗಿ ಅಧಿಕ ಆಮ್ಲ
ಉತ್ಪತ್ತಿಯಾಗುವುದು ಇತ್ಯಾದಿ ಅನೇಕ ಕಾರಣಗಳಿಂದಾಗಿ ಹೊಟ್ಟೆಯಲ್ಲಿ ಅಧಿಕ ಆಮ್ಲವು ಸಂಗ್ರಹಣೆ ಆಗಬಹುದು.
ಕಾಣಿಸಿಕೊಳ್ಳುತ್ತದೆ. ಹೊಟ್ಟೆಯ ಆಮ್ಲವನ್ನು ನಿಯಂತ್ರಣಕ್ಕೆ ತರುವಲ್ಲಿ ಆಹಾರವು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ.
Related Articles
Advertisement
ಅಸಿಡಿಟಿ ನಿವಾರಣೆಗಾಗಿ ಕೆಲವು ಸಲಹೆಗಳುತಂಪು ಪಾನೀಯ ಮತು ಕೆಫೀನ್‌ಯುಕ್ತ ಪಾನೀಯಗಳನ್ನು ಸೇವಿಸಬೇಡಿ.
ಪ್ರತಿದಿನ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಪ್ರತಿದಿನ 10-12 ಗ್ಲಾಸ್‌ನಷ್ಟು ನೀರನ್ನು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದರಿಂದ
ವಾಯು ಮತ್ತು ಆಸಿಡಿಟಿಯಂತಹ ರೋಗ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.
ನೀವು ಅಸಿಡಿಟಿಯಿಂದ ಬಳಲುತ್ತಿದ್ದರೆ ಎಳನೀರು ಕುಡಿಯಿರಿ ಅದು ಅಸಿಡಿಟಿಯನ್ನು ಶಮನಗೊಳಿಸಿ, ಜೀರ್ಣಾಂಗವ್ಯೂಹವನ್ನು ಶಾಂತಗೊಳಿಸುತ್ತದೆ.
ರಾತ್ರಿಯ ಊಟವನ್ನು ನೀವು ನಿದ್ದೆ ಹೋಗುವುದಕ್ಕೆ 2 ರಿಂದ 3 ಗಂಟೆ ಮೊದಲು ಮುಗಿಸಿಬಿಡಿ.
ಎರಡು ಊಟಗಳ ನಡುವೆ ದೀರ್ಘ ಅಂತರವಿರುವುದು ಅಸಿಡಿಟಿ ಕಾಣಿಸಿಕೊಳ್ಳಲು ಇರುವ ಮತ್ತೂಂದು ಕಾರಣ. ಮಧ್ಯೆ ಮಧ್ಯೆ ಸಣ್ಣ ಸಣ್ಣ ಪ್ರಮಾಣದಲ್ಲಿ ನಿಯುತವಾಗಿ ಊಟ ಸೇವಿಸಿ. ಖಿನ್ನತೆಯಿಂದ ದೂರವಾಗಲು ಗಿಡಮೂಲಿಕೆ ಔಷಧ ಉಪ್ಪಿನಕಾಯಿ, ಮಸಾಲೆ ಚಟ್ನಿ, ವಿನೇಗರ್ ಇತ್ಯಾದಿಗಳನ್ನು ಸೇವಿಸಬೇಡಿ
ಯೋಗ ಅಥವಾ ಇತರ ಒತ್ತಡ- ನಿವಾರಕ ಚಟುವಟಿಕೆಗಳು ಅಸಿಡಿಟಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಬಹಳ ಸಹಕಾರಿ ಆಗಬಹುದು.
ಕರಿದ ಪದಾರ್ಥ, ಕೊಬ್ಬುಯುಕ್ತ ಆಹಾರ, ಹಾಳುಮೂಳು ಆಹಾರ ಮತ್ತು ಚಾಕೊಲೇಟ್ ಗಳನ್ನು ಸೇವಿಸಬಾರದು.
ಕಾಬೋìಹೈಡ್ರೇಟ್ ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ – ಉದಾ: ಅನ್ನ -ಇಂತಹ ಆಹಾರಗಳಲ್ಲಿ ಆಮ್ಲವು ಬಹಳ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿ ಆಗುತ್ತದೆ.
ಮನೆಯಲ್ಲೆ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಿ ಮತ್ತು ಹೊರಗಡೆ ಆಹಾರ ಸೇವಿಸುವುದನ್ನು ತಪ್ಪಿಸಿಕೊಳ್ಳಿ.
ಸಿಗರೇಟು, ಆಲ್ಕೋಹಾಲ್ ಮತ್ತು ಗ್ಯಾಸ್ ತುಂಬಿಸಿರುವ ಪಾನೀಯಗಳನ್ನು ದೂರ ಇಡಿ. ದಕ್ಷ ಕುಮಾರಿ
ಆಹಾರತಜ್ಞರು, ಪಥ್ಯಾಹಾರ ವಿಭಾಗ,
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ.