Advertisement

ಜಿಪಂ ಅಧ್ಯಕ್ಷರಿಂದ ಪ್ರಗತಿ ಪರಿಶೀಲನೆ

06:10 PM Jun 18, 2020 | Naveen |

ಹಿರಿಯೂರು: ನಗರದ ಸಾಮರ್ಥ್ಯಸೌಧದಲ್ಲಿ ಬುಧವಾರ ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು, ತಾಲೂಕು ಪಂಚಾಯತ್‌ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

Advertisement

ಕೃಷಿ, ತೋಟಗಾರಿಕೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಹಣ, ಖರ್ಚು ವೆಚ್ಚಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೊರೊನಾ ಹಾವಳಿಯಿಂದ ಜನರ ಬದುಕು ಅಸ್ತವ್ಯಸ್ತವಾಗಿದ್ದು, ಅಧಿಕಾರಿಗಳು, ರೈತರ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು. ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ, ಔಷದಿ ವಿತರಣೆ ಮಾಡಬೇಕೆಂದರು.

ತೋಟಗಾರಿಕೆ ಇಲಾಖೆ ಅಧಿಕಾರಿ ತೋಟದಪ್ಪ ಇಲಾಖೆ ಯೋಜನೆಗಳ ಮಾಹಿತಿ ನೀಡಿ, ಕಳೆದ ಮೂರು ವರ್ಷದಿಂದ ತೆಂಗು, ನೇರಳೆ, ಹೂವು, ನುಗ್ಗೆ ಗಿಡಗಳು ನರೇಗಾ ಯೋಜನೆಯಡಿ ಇಲಾಖೆಗೆ ಬಂದಿಲ್ಲ ಎಂದರು. ಬೆಸ್ಕಾಂನ ತಿಮ್ಮರಾಯಪ್ಪ ಮಾತನಾಡಿ, ರೈತರು ಅಕ್ರಮ ಸಕ್ರಮ ಯೋಜನೆಯಡಿ ಸಕ್ರಮಗೊಳಿಸಿಕೊಳ್ಳಲು 30 ದಿನ ಕಾಲಾವಕಾಶ ನೀಡಲಾಗಿದೆ. ಇದರಿಂದ ರೈತರು ಹೆಚ್ಚಿನ ಪ್ರಯೋಜನ ಪಡೆಯುವಂತೆ ತಿಳಿಸಿದರು.

ತಾಲೂಕಿನ 7 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈಗಾಗಲೇ ಎಲ್ಲ ಸಿದ್ಧತೆ ಮಾಡಲಾಗಿದೆ, ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌, ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಹೋಬಳಿವಾರು ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ಹೋಗಲು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು. ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ, ಉಪಾಧ್ಯಕ್ಷೆ ಪುಷ್ಪಾ ರಂಗನಾಥ್‌, ಜಿಪಂ ಸದಸ್ಯರಾದ ಆರ್‌. ನಾಗೇಂದ್ರ ನಾಯ್ಕ, ಗೀತಾ ನಾಗಕುಮಾರ್‌, ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next