Advertisement

Hero MotoCorp ನಲ್ಲಿ ಉದ್ಯೋಗಿಗಳಿಗೆ ವಿಆರ್‌ಎಸ್‌ ಜಾರಿ ತರಲು ನಿರ್ಧಾರ

06:18 PM Apr 05, 2023 | |

ನವದೆಹಲಿ/ಮುಂಬೈ: ದೇಶದ ಪ್ರಮುಖ ದ್ವಿಚಕ್ರ ವಾಹನಗಳನ್ನು ಉತ್ಪಾದಿಸುವ ಕಂಪನಿ ಹೀರೋ ಮೋಟೋ ಕಾರ್ಪ್‌ ಲಿಮಿಟೆಡ್‌ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್‌ಎಸ್‌) ಜಾರಿ ತರಲು ನಿರ್ಧರಿಸಿದೆ.

Advertisement

ಶೀಘ್ರವಾಗಿ ಬದಲಾಗುತ್ತಿರುವ ಪರಿಸ್ಥಿತಿಗೆ ಅನುಗುಣವಾಗಿ ಮತ್ತು ಸದೃಢ ಕಂಪನಿಯ ನಿರ್ಮಾಣದ ನಿಟ್ಟಿನಲ್ಲಿ ಕಂಪನಿ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಲು ನಿರ್ಧರಿಸಿದೆ ಎಂದು ಬುಧವಾರ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಬುಧವಾರದಿಂದಲೇ ನಿಯಮ ಜಾರಿಯಾಗಿದೆ ಎಂದೂ ಸ್ಪಷ್ಟಪಡಿಸಿದೆ. ಮುಂದಿನ ದಿನಗಳಿಗೆ ಅಗತ್ಯವಾಗಿರುವಂತೆ ಚಾಣಾಕ್ಷತೆ, ಚುರುಕುತನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕಂಪನಿಯಲ್ಲಿ ಉದ್ಯೋಗಿಗಳ ಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಾಗುತ್ತಿದೆ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next