Advertisement

Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

08:31 PM Apr 28, 2024 | Team Udayavani |

ಅಹಮದಾಬಾದ್: ಗುಜರಾತ್ ಕರಾವಳಿಯಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಕೋಸ್ಟ್ ಗಾರ್ಡ್ (ICG) ಪಾಕಿಸ್ಥಾನ ಮೂಲದ ಬೋಟ್ ನಿಂದ 600 ಕೋಟಿ ರೂ. ಮೌಲ್ಯದ 86 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡು 14 ಜನರನ್ನು ಬಂಧಿಸಿದೆ.

Advertisement

ಅರಬ್ಬೀ ಸಮುದ್ರದಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಸಮನ್ವಯದಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಪ್ರಕಟಣೆಯಲ್ಲಿ ತಿಳಿಸಿದೆ.

ಕೋಸ್ಟ್ ಗಾರ್ಡ್ ಮತ್ತು ಎಟಿಎಸ್ ಕಳೆದ ಮೂರು ವರ್ಷಗಳಲ್ಲಿ ನಡೆಸಿದ 11 ನೇ ಯಶಸ್ವಿ ಜಂಟಿ ಕಾರ್ಯಾಚರಣೆ ಇದಾಗಿದೆ. ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಗುಜರಾತ್ ನ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next