ತೆಕ್ಕಟ್ಟೆ: ರಾಜ್ಯದಲ್ಲಿ ಭಾರೀ ಪ್ರವಾಹ, ಭೂಕುಸಿತಗಳಿಂದ ಅಪಾರ ಹಾನಿ ಸಂಭವಿಸಿದ್ದು, ಪ್ರವಾಹ ಸಂತ್ರಸ್ತರಿಗಾಗಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿಯ ವಿದ್ಯಾರ್ಥಿ ಪೋಷಕರು ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿ ಸಿಹಿ ತಿಂಡಿಗಳನ್ನು ಹಂಚುವ ಬದಲಿಗೆ ನೆರೆ ಸಂತ್ರಸ್ತರಿಗಾಗಿ ವಸ್ತುರೂಪದ ಕೊಡುಗೆಗಳನ್ನು ಸಂಗ್ರಹಿಸುವ ಮಹತ್ವದ ಕಾರ್ಯವನ್ನು ಹಮ್ಮಿಕೊಂಡು ಮಾನವೀಯತೆ ಮೆರೆದಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಎನ್ನುವುದು ಬರೀ ಭಾಷಣಕ್ಕೆ ಮಾತ್ರ ಸೀಮಿತವಾಗದೆ , ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣರಾಗಿರುವ ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಯಾವುದೇ ಪ್ರಚಾರ ಬಯಸದೆ ತಮ್ಮ ಒಂದು ದಿನದ ವೇತನವನ್ನು ನೆರೆ ಸಂತ್ರಸ್ತರಿಗೆ ನೀಡಿ ಮಾನವೀಯವಾಗಿ ಸ್ಪಂದಿಸಿದ್ದಾರೆ.
ಈ ಸಂದರ್ಭ ನಿವೃತ್ತ ಯೋಧ ಕಂದಾವರ ಸಂತೋಷ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.