ಚಿಕ್ಕಮಗಳೂರು : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಪರಿಣಾಮ ಬತ್ತಿಹೋಗಿದ್ದ ಜಲಪಾತಗಳು ಮೈದುಂಬಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿವೆ.
ತರೀಕೆರೆ ತಾಲೂಕಿನಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿನ ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು, ಒಂದೇ ರಾತ್ರಿಯ ಮಳೆಗೆ ಜಲಪಾತ ಅಬ್ಬರಿಸಿಕೊಂಡು ಧುಮ್ಮಿಕ್ಕುತ್ತಿದೆ.
ಕಾಫಿನಾಡಿನ ಕೆಮ್ಮಣ್ಣುಗುಂಡಿ ಗುಡ್ಡಗಾಡು ತಪ್ಪಲ್ಲಿನಲ್ಲೂ ಭಾರೀ ಮಳೆಯಾಗುತ್ತಿದ್ದು
ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪವಿರುವ ಕಲ್ಲತ್ತಿಗರಿ ಜಲಪಾತವನ್ನು ನೋಡಲು ಪ್ರವಾಸಿಗರ ದಂಡು ಜಲಪಾತದತ್ತ ಹರಿದುಬರುತ್ತಿದೆ.
ಇದನ್ನೂ ಓದಿ: Alert: ದೇವರನಾಡಿನಲ್ಲಿ ಮಳೆಯ ಅಬ್ಬರಕ್ಕೆ 11 ಮೃತ್ಯು , 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್