Advertisement

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

04:33 PM Aug 07, 2019 | Suhan S |

ಹುಬ್ಬಳ್ಳಿ: ಕೇಂದ್ರ ಸರಕಾರ ಜಮ್ಮು-ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಮತ್ತು ಕಲಂ 35ಎ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಹಾಗೂ ಆ.15ರ ಸ್ವಾತಂತ್ರ್ಯೋತ್ಸವ ಅಂಗವಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ.

Advertisement

ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದರಿಂದ ಉಗ್ರರು ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಕೆಎಸ್‌ಐಎಸ್‌ಎಫ್‌ ಹಾಗೂ ಭದ್ರತಾ ಸಿಬ್ಬಂದಿ ಭಾರಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ನಿಲ್ದಾಣ ಪ್ರವೇಶಿಸುವ ಪ್ರತಿ ವಾಹನಗಳನ್ನು ಪೊಲೀಸರು ಪ್ರತಿಯೊಬ್ಬರನ್ನು ಮುಖ್ಯ ಪ್ರವೇಶ ದ್ವಾರ ಬಳಿಯೇ ತಡೆದು, ಬಾಂಬ್‌ ಪತ್ತೆ ಯಂತ್ರಯೊಂದಿಗೆ ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದಾರೆ. ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸ್‌ ಭದ್ರತೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next