Advertisement

IT Raid; ಹೈಕಮಾಂಡ್ ನಯಾ ಪೈಸೆ ಹಣವನ್ನು ಕೇಳಿಲ್ಲ, ಬಿಜೆಪಿ ಆರೋಪ ಸುಳ್ಳು: ಸಿದ್ದರಾಮಯ್ಯ

11:12 AM Oct 16, 2023 | Team Udayavani |

ಮೈಸೂರು: ಮಾಜಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣದ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪ ಸುಳ್ಳು. ಅವೆಲ್ಲವೂ ನಿರಾಧಾರ. ನಮಗೆ ಈವರೆಗೂ ಹೈಕಮಾಂಡ್ ನಯಾ ಪೈಸೆ ಹಣವನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರನನ್ನು ಬಿಜೆಪಿ, ಕಾಂಗ್ರೆಸ್ ಗುತ್ತಿಗೆದಾರನೆಂದು ಹೇಳಲಾಗುತ್ತಾ? ಅವನು ಬಿಜೆಪಿ ಗುತ್ತಿಗೆದಾರನೆಂದು ಈಗ ನಾನು ಹೇಳುತ್ತೇನೆ. ಅದನ್ನು ಯಾರಾದರೂ ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು.

ಐದು ರಾಜ್ಯ ಚುನಾವಣೆಗೂ ನಮಗೂ ಏನೂ ಸಂಬಂಧ? ನಾವೇನಾದರೂ ನಮ್ಮ ಚುನಾವಣೆಗೆ ಹೋಗಿ ಯಾರಾನ್ನಾದರೂ ಕೇಳಿದ್ದೀವಾ? ಈಗ ಅವರಿಗೆ ಕೊಡಬೇಕು ಎನ್ನುವ ಪ್ರಶ್ನೆಯಲ್ಲಿ ಅರ್ಥವೇ ಇಲ್ಲ. ಬಿಜೆಪಿಯವರು ಸುಖಾಸುಮ್ಮನೇ ಆರೋಪ ಮಾಡುತ್ತಾರೆ. ಇದು ಸರ್ಕಾರದ ದುಡ್ಡೆಂದು ಆದಾಯ ತೆರಿಗೆ ಇಲಾಖೆ ಹೇಳಿದೆಯೇ? ಸರ್ಕಾರದ ಮೇಲೆ ಇಲಾಖೆ ಆರೋಪ ಮಾಡಿದೆಯೇ? ಇದರ ಬಗ್ಗೆ ನಾವೇಕೆ ತನಿಖೆ ಮಾಡಬೇಕು. ಐಟಿ ರೈಡ್ ಗಳು ಸಾಮಾನ್ಯವಾಗಿ ನಡೆಯುತ್ತದೆ. ಈ ರೈಡ್ ಕೂಡ ಅದರ ಭಾಗ ಅಷ್ಟೇ. ಇದನ್ನು ರಾಜಕೀಯಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಅಷ್ಟೇ ಎಂದರು.

ವಿದ್ಯುತ್ ಕೊರತೆಯಿದೆ: ಎರಡರಿಂದ ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆಯಿದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಸಿಎಂ ಹೇಳಿದರು.

ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ‌. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರಿ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಎಲ್ಲದರ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.

Advertisement

ರಾಜ್ಯದಲ್ಲಿ ಕುಡಿಯುವ ‌ನೀರು, ಮೇವಿನ ಕೊರತೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಅವರು, ರಾಜ್ಯದ 236 ತಾಲ್ಲೂಕುಗಳ‌ ಪೈಕಿ 216 ತಾಲೂಕುಗಳು ಬರಪೀಡಿತವಾಗಿದೆ. 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ. ಸದ್ಯಕ್ಕೆ ಕುಡಿಯುವ ನೀರಿ‌ನ ಸಮಸ್ಯೆಯಿಲ್ಲ. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ. ಮೇವಿನ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next