Advertisement

ಸಚಿವರಿಗೆ ನಾಳೆ ಹೈಕಮಾಂಡ್‌ ನೀತಿ ಪಾಠ

10:17 PM Jun 19, 2023 | Team Udayavani |

ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯವೈಖರಿ, ಸಚಿವರ ನಡವಳಿಕೆ ಹೇಗಿರಬೇಕು ಎಂಬುದು ಸೇರಿ ಹಲವು ವಿಷಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬುಧವಾರ ನೀತಿಪಾಠ ಬೋಧಿಸಲಿದೆ.

Advertisement

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ ರಾಹುಲ್‌ಗಾಂಧಿ ಅವರು ರಾಜ್ಯದ ಸಚಿವರಿಗೆ ನೀತಿ ಪಾಠ ಬೋಧಿಸಲಿದ್ದು ಈ ಸಂಬಂಧ ಕೆಲವು ಸಚಿವರು ತಮ್ಮ ಇಲಾಖೆಯ ಟಿಪ್ಪಣಿಯೊಂದಿಗೆ ಸಜ್ಜಾಗಿದ್ದಾರೆ. ವಿಶೇಷವಾಗಿ ಕಾಂಗ್ರೆಸ್‌ನ 5 ಗ್ಯಾರಂಟಿಗಳನ್ನು ಜಾರಿಗೊಳಿಸಲಿರುವ ಪ್ರಮುಖ ಇಲಾಖೆಗಳಾದ ಆಹಾರ ಮತ್ತು ನಾಗರಿಕ ಪೂರೈಕೆ, ಸಾರಿಗೆ, ಇಂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉನ್ನತ ಶಿಕ್ಷಣದ ಸಚಿವರು ವರಿಷ್ಠರಿಂದ ಎದುರಾಗಬಹುದಾದ ಪ್ರಶ್ನೆಗಳಿಗೆ ಉತ್ತರ ಕೊಡಲು ಸಮರ್ಪಕ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಸೇರಿ ಮುಂಬರುವ ಎಲ್ಲಾ ಚುನಾವಣೆಗಳನ್ನು ಗೆಲ್ಲುವ ಸವಾಲು ಸರ್ಕಾರದ ಮುಂದೆ ಇರುವುದರಿಂದ ಸರ್ಕಾರದ ಕಾರ್ಯವೈಖರಿ ಜನಪರ ಆಗಿರಬೇಕು, ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆ ಇರಬೇಕು, ಪಕ್ಷದ ಕಾರ್ಯಕರ್ತರಿಗೆ ಸ್ಥಾನಮಾನವೂ ಸೇರಿದಂತೆ ಹಲವು ವಿಷಯಗಳ ಬಗ್ಗೆ ವರಿಷ್ಠರು ಮಾರ್ಗದರ್ಶನ ನೀಡಲಿದ್ದಾರೆ.

ಇಂದೇ ಪಯಣ: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ 3 ಉಪ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಿದ ಬಳಿಕ ಬಹುತೇಕ ಸಂಜೆಯಿಂದಲೇ ಸಚಿವರು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿಯೇ ದಿಲ್ಲಿ ಸೇರಲಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂಗಳವಾರವೇ ದಿಲ್ಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ.

ಉತ್ತಮ ಆಡಳಿತದ ಬಗ್ಗೆ ಚರ್ಚೆ: ಡಿಸಿಎಂ
ಪಕ್ಷದ ಪ್ರಣಾಳಿಕೆ ಜಾರಿ, ನಾವು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಎಚ್ಚರಿಕೆಯಿಂದ ಜನರ ಸೇವೆ, ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಸಂಘಟನೆಗೆ ಜಿÇÉಾ ಉಸ್ತುವಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ. ಉತ್ತಮ ಆಡಳಿತ ನೀಡುವುದು ಸೇರಿದಂತೆ ಅನೇಕ ವಿಚಾರವಾಗಿ ಚರ್ಚಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಕುಮಾರ್‌ ತಿಳಿಸಿದ್ದಾರೆ. ನಮ್ಮ ನಾಯಕರು ನಮ್ಮ ಅಧ್ಯಕ್ಷರು ಹಾಗೂ ಹೈಕಮಾಂಡ್‌ ಭೇಟಿಗೆ ಕಾಲವಕಾಶ ಕೇಳುತ್ತಿದ್ದರು. ಹೀಗಾಗಿ ಎಲ್ಲರನ್ನೂ ಒಟ್ಟಿಗೆ ಕರೆಸಲು ನಮ್ಮ ನಾಯಕರು ತೀರ್ಮಾನಿಸಿ¨ªಾರೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next