Advertisement

13 ಸ್ಥಾನ ಗೆಲ್ಲಲು ಹೈಕಮಾಂಡ್‌ ಸೂಚನೆ

10:59 PM Nov 22, 2019 | Lakshmi GovindaRaj |

ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಉಪಚುಣಾವಣೆ ಪೈಕಿ 13 ಸ್ಥಾನಗಳನ್ನು ಗೆಲ್ಲಲೇ ಬೇಕು ಎಂದು ಬಿಜೆಪಿ ವರಿಷ್ಠರು ರಾಜ್ಯ ಬಿಜೆಪಿ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರಚಾರದ ವೇಳೆ ವೈಯಕ್ತಿಕ ಟೀಕೆ, ನಿಂದನೆ, ಅವಹೇಳನ ಕಾರಿ- ಆಕ್ಷೇಪಾರ್ಹ ಆರೋಪ ಮಾಡಬಾರದು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊಡುಗೆ ಹಾಗೂ ಅಭಿವೃದ್ಧಿ ಅಜೆಂಡಾವನ್ನು ಆಧಾರವಾಗಿಟ್ಟುಕೊಂಡು ಪ್ರಚಾರ ನಡೆಸಬೇಕು.

Advertisement

ಯಾವುದೇ ರೀತಿಯ ವಿವಾದಕ್ಕೆ ಎಡೆ ಮಾಡಿಕೊಡಬಾರದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ಹೇಳಲಾಗಿದೆ. ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ವರಿಷ್ಠರು ರಾಜ್ಯ ಬಿಜೆಪಿ ಸರ್ಕಾರವನ್ನು ಶತಾಯ ಗತಾಯ ಉಳಿಸಿಕೊಳ್ಳಬೇಕು. ಹಾಗಾಗಿ ಸರ್ಕಾರವನ್ನು ಸುಸ್ಥಿರಗೊಳಿಸಲು 13 ಸ್ಥಾನ ಗೆಲ್ಲಬೇಕು. ಅದಕ್ಕೆ ಪೂರಕ ಕಾರ್ಯತಂತ್ರ ರೂಪಿಸಬೇಕು ಎಂದು ಸೂಚನೆ ನೀಡಿದ್ದಾರೆಂದು ಮೂಲಗಳು ಹೇಳಿವೆ.

ಯಡಿಯೂರಪ್ಪ-ನಳಿನ್‌ ಪ್ರಚಾರ ಇಂದು: ಈ ನಡುವೆ ಮುಖ್ಯಮಂತ್ರಿ ಯಡಿ ಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಪ್ರಚಾರ ಆರಂಭಿಸಲಿದ್ದು, ಉಪ ಚುನಾವಣಾ ಕಣ ಇನ್ನಷ್ಟು ರಂಗೇರುವ ಸಾಧ್ಯತೆ ಇದೆ. ಯಡಿಯೂರಪ್ಪ ಶನಿವಾರ ಅಥಣಿ, ಕಾಗವಾಡ, ಗೋಕಾಕ್‌ ಕ್ಷೇತ್ರಗಳಲ್ಲಿ ಸಾರ್ವಜನಿಕ, ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ನಳಿನ್‌ ಕುಮಾರ್‌ ಕಟೀಲು ಶನಿವಾರ ಕೆ.ಆರ್‌. ಪೇಟೆ, ಹುಣಸೂರು ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಚಿಕ್ಕಬಳ್ಳಾಪುರದಲ್ಲಿ ಪ್ರಬುದ್ಧರ ಸಭೆ ಹಾಗೂ ಬೂತ್‌ ಮಟ್ಟದ ಕಾರ್ಯ ಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next