Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಸನ್ಯಾಸಿಯಾ? ನಾನೇನು ಕಾವಿ ಬಟ್ಟೆ ತೊಟ್ಟಿದ್ದೇನಾ? ಮೊದಲು ಕಾಂಗ್ರೆಸ್ ಸರ್ಕಾರ ಬರಬೇಕು. ಮುಖ್ಯಮಂತ್ರಿಯನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
Related Articles
Advertisement
ಎಲ್ಲ ಪ್ರಕರಣದ ತನಿಖೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಭ್ರಷ್ಟಾತಿಭ್ರಷ್ಟ ಸರ್ಕಾರ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆಗೆ ಒಳಪಡಿಸಲಾಗುವುದು. ನಾವು ನಡೆಸಿರುವ ಆಂತರಿಕ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಪ್ರತಿಪಕ್ಷ ಕಾಂಗ್ರೆಸ್ ದುರ್ಬಲವಾಗಿಲ್ಲ. ಸರ್ಕಾರದ ವೈಫಲ್ಯಗಳ ವಿರುದ್ದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಹೋರಾಟದ ಫಲವಾಗಿಯೇ ಸಚಿವರು ರಾಜೀನಾಮೆ ನೀಡುವಂತಾಯಿತು. ಆದರೂ ಇದು ದಪ್ಪ ಚರ್ಮದ ಭ್ರಷ್ಟ ಸರ್ಕಾರವಾಗಿದೆ. ಹೋಟೆಲ್ ಗಳಲ್ಲಿ ತಿನ್ನುವ ಪದಾರ್ಥಗಳಿಗೆ ಇಷ್ಟು ತೆರಿಗೆ ಎಂದು ಬೋರ್ಡ್ ತಗುಲಿ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದೆ ಮುಖ್ಯಮಂತ್ರಿ ಸ್ಥಾನಕ್ಕಿಷ್ಟು, ಮಂತ್ರಿ ಸ್ಥಾನಕ್ಕಿಷ್ಟು ಎಂದು ಬೋರ್ಡ್ ಹಾಕುತ್ತಾರೆ. ಸರ್ಕಾರಿ ಕಾಮಗಾರಿಯಲ್ಲಿ ಶೇ 40 ಕಮಿಷನ್ ಪಡೆಲಾಗುತ್ತಿದೆ ಎಂಬ ಆರೋಪವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಅಕ್ರಮ ನೇಮಕಾತಿ ಹಗರಣವನ್ನು ಕೂಡ ಮುಚ್ಚಿ ಹಾಕುವ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿಯವರೇ ಆಗಿರುವ ಎಚ್ ವಿಶ್ವನಾಥ್ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಕೂಡ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ. ಅವರಿಗೇಕೆ ನೋಟಿಸ್ ಕೊಟ್ಟು ಪ್ರಶ್ನೆ ಮಾಡಲಿಲ್ಲ. ಕೇವಲ ಶಾಸಕ ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಏಕೆ ನೋಟಿಸ್ ನೀಡಿದ್ದೀರಾ ಎಂದು ಪ್ರಶ್ನಿಸಿದರು.
ಬಿಜೆಪಿ ಮತ್ತು ಜೆಡಿಎಸ್ ನ ಕೆಲ ನಾಯಕರು ಕಾಂಗ್ರೆಸ್ ಸೇರುವ ಸುಳಿವು ನೀಡಿದ ಡಿಕೆಶಿ, ಕೆಲವರು ಸೇರುತ್ತಾರೆ. ಆದರೆ ಇದರ ಗುಟ್ಟನ್ನು ಬಿಟ್ಟುಕೊಡುವುದಿಲ್ಲ. ಅದನ್ನು ರಹಸ್ಯವಾಗಿ ಇಡುತ್ತೇನೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂದರು.