Advertisement

ಅಕ್ರಮ ಮನೆ ನಿರ್ಮಾಣ: ನಗರಾಭಿವೃದ್ಧಿ ಆಯುಕ್ತರ ವಿರುದ್ಧ ವಾರಂಟ್‌ ಜಾರಿ

10:33 PM Aug 09, 2022 | Team Udayavani |

ಬೆಂಗಳೂರು: ರಾಯಚೂರು ನಗರದ ಸತ್ಯನಾಥ ಗೃಹ ನಿರ್ಮಾಣ ಸಹಕಾರ ಸಂಘದ ಬಡಾವಣೆಯಲ್ಲಿ ಉದ್ಯಾನಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿರುವ ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ಕುರಿತ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಹೈಕೋರ್ಟ್‌ ಜಾಮೀನು ರಹಿತ ವಾರೆಂಟ್‌ ಜಾರಿಗೊಳಿಸಿದೆ.

Advertisement

ಟಿ. ಮಾರಪ್ಪ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿ ಆದೇಶಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next