Advertisement

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

12:44 AM Oct 15, 2024 | Team Udayavani |

ಬೆಂಗಳೂರು: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರಕಾರ ಹೊರಡಿಸಿದ್ದ ಆದೇ
ಶಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

Advertisement

ಈ ವಿಚಾರವಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಲ್ಲಿಸಿದ್ದ ತಕರಾರರು ಅರ್ಜಿಯು ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರಕಾರ ಅ. 7ರಂದು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿ ವಿಚಾರಣೆಯನ್ನು ಅ. 16ಕ್ಕೆ ಮುಂದೂಡಿತು.

ರಾಜ್ಯ ಸರಕಾರಿ ನೌಕರರ ಸಂಘದ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವುದರಿಂದ, ಸಂಘದ ಸದಸ್ಯರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಕೆಎಎಸ್‌ ಅಧಿಕಾರಿ ಸಿ.ಎನ್‌. ಮಂಜುನಾಥ್‌ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಸಹಕಾರ ಇಲಾಖೆ ಅ. 7ರಂದು ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಸರಕಾರಿ ನೌಕರರ ಸಂಘ ಹೈಕೋರ್ಟ್‌ ಮೆಟ್ಟಿಲೇರಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next