ಬೆಂಗಳೂರು: ಹಾಸನ ಲೋಕಸಭಾ ಸದಸ್ಯ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ದೇವರಾಜೇಗೌಡ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಇಂದು ಇದರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಪೀಠ, ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ.
ಇದನ್ನೂ ಓದಿ:One Nation One Election ಕೇಂದ್ರ ಸರಕಾರದ ರಾಜಕೀಯ ತಂತ್ರ; ಸಚಿವ ಎಚ್.ಕೆ. ಪಾಟೀಲ ಆರೋಪ
ಅಲ್ಲದೆ ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಕೋರಿದ್ದ ಪರಾಜಿತ ಅಭ್ಯರ್ಥಿ ಎ.ಮಂಜು ಅವರ ಮನವಿ ಪುರಸ್ಕರಿಸಲೂ ನ್ಯಾಯಾಲಯ ನಿರಾಕರಿಸಿದೆ. ಅರ್ಜಿದಾರರು ಚುನಾವಣಾ ಅಕ್ರಮ ಎಸಗಿರುವುದರಿಂದ ಅವರನ್ನೂ ವಿಜೇತ ಅಭ್ಯರ್ಥಿ ಎಂದು ಘೋಷಿಸಲಾಗದು ಎಂದು ನ್ಯಾಯಾಲಯ ಆದೇಶಿಸಿದೆ
ಸದ್ಯ ಪ್ರಜ್ವಲ್ ರೇವಣ್ಣ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.