Advertisement

ಮಾಲಿನ್ಯ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್‌ ಅಸ್ತು

03:50 AM Jan 07, 2017 | Team Udayavani |

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಲಕ್ಷ್ಮಣ ಅವರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

Advertisement

ಮಾಹಿತಿ ಹಕ್ಕು ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ, ನಿಯಮಾನುಸಾರ ಲಕ್ಷ್ಮಣ ಅವರ ನೇಮಕಾತಿ ಪ್ರಕ್ರಿಯೆ ನಡೆಸಿದೆ ಎಂದು ಸರ್ಕಾರ ತಿಳಿಸಿದೆ. ಹೀಗಾಗಿ, ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಯ ಬಯಸುವುದಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತು.

ಕಾನೂನು ಪ್ರಕಾರ ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಪರಿಸರ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಸ್ನಾತಕೋತ್ತರ ಅಥವಾ ಪರಿಸರ ತಂತ್ರಜ್ಞಾನ ವಿಷಯದಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದವರನ್ನು ನೇಮಕ ಮಾಡಬೇಕು. ಆದರೆ ಲಕ್ಷ¾ಣ ಅವರು ಸಿವಿಲ್‌ ಎಂಜಿನಿಯರಿಂಗ್‌ ಪದವೀಧರರಾಗಿ¨ªಾರೆ. ಇದು ರಾಜಕೀಯ ಪ್ರೇರಿತವಾಗಿದೆ. ಆದ್ದರಿಂದ ಈ ನೇಮಕವನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಶುಕ್ರವಾರ ವಿಚಾರಣೆ ವೇಳೆ ರಾಜ್ಯ ಅಡ್ವೋಕೇಟ್‌ ಜನರಲ್‌ ವಾದಿಸಿ, ನಿಯಮಾನುಸಾರ ಲಕ್ಷ್ಮಣ ಅವರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು. ಈ ವಾದವನ್ನು ನ್ಯಾಯಪೀಠ ಪುರಸ್ಕರಿಸಿತು.
 

Advertisement

Udayavani is now on Telegram. Click here to join our channel and stay updated with the latest news.

Next