Advertisement
ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಪಿಐಎಲ್‌ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಎ.ಎಸ್. ಓಕಾ, ನ್ಯಾ| ಎನ್.ಎಸ್. ಸಂಜಯ್ ಗೌಡ ಅವರಿದ್ದ ಪೀಠ ಈ ಆದೇಶ ನೀಡಿದೆ. ಇದೇ ವೇಳೆ ಚುನಾವಣೆ ಮುಂದೂ ಡುವ ಸರಕಾರದ ನಿರ್ಣಯಕ್ಕೆ ಚುನಾವಣಾ ಆಯೋಗ ಬದ್ಧವಾಗಿರಬೇಕೆಂದೇನೂ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿ, ವಿಚಾರಣೆಯನ್ನು ಆ. 13ಕ್ಕೆ ಮುಂದೂಡಿದೆ.
Related Articles
Advertisement
ಚು. ಆಯೋಗಕ್ಕೆ ನಿರ್ದೇಶನ :
ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾಯಿತ ಅವಧಿ ಪೂರ್ಣಗೊಂಡಿದೆ. ಸಂವಿಧಾನದ ಪರಿಚ್ಛೇದ 243(ಯು) ಪ್ರಕಾರ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕೆಂದು ಈ ಹಿಂದೆಯೇ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಆದ್ದರಿಂದ ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿತು.