Advertisement
ಸೋಮವಾರ ಬೆಳಗ್ಗೆ ಕಲಾಪ ಪ್ರಾರಂಭವಾಗುತ್ತಿ ದ್ದಂತೆ ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ಅವರಿದ್ದ ಏಕಸದಸ್ಯ ನ್ಯಾಯ ಪೀಠದ ಮುಂದೆ ವಿಷಯವನ್ನು ಪ್ರಸ್ತಾವಿಸಿದರು. ವಕೀಲರ ಮನವಿ ಆಲಿಸಿದ ನ್ಯಾಯಪೀಠವು ವಿಚಾ ರಣೆಯನ್ನು ಮಂಗಳವಾರ ನಡೆಸುವುದಾಗಿ ತಿಳಿಸಿತು.
ಯೂಟ್ಯೂಬ್, ಫೇಸ್‌ಬುಕ್, ಎಕ್ಸ್‌ಕಾರ್ಪ್, (ಟ್ವಿಟರ್) ಮತ್ತು ಇತರ ತಾಣಗಳಲ್ಲಿ ಯೂಟ್ಯೂಬ್‌ನಲ್ಲಿ ನೇರ ಪ್ರಸಾರದ ಮೂಲಕ ಪಡೆದಿರುವ ವೀಡಿಯೋಗಳು, ವೀಡಿಯೋ ಕ್ಲಿಪ್‌ಗ್ಳು ಹಾಗೂ ಸಂಕಲನ ಮಾಡಿರುವ ವೀಡಿಯೋಗಳನ್ನು ತತ್‌ಕ್ಷಣ ತೆರವು ಮಾಡಬೇಕು. ಈ ರೀತಿಯ ವೀಡಿಯೋಗಳನ್ನು ಬಳಕೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.