Advertisement

High Court: ಎಸ್‌ಟಿಎಸ್‌ ಪುತ್ರನಿಗೆ ಬ್ಲ್ಯಾಕ್‌ಮೇಲ್‌: ಉದ್ಯಮಿ ಮೇಲಿನ ಪ್ರಕರಣ ರದ್ದು

10:01 AM Oct 29, 2024 | Team Udayavani |

ಬೆಂಗಳೂರು: ಶಾಸಕ ಎಸ್‌.ಟಿ.ಸೋಮಶೇಖರ್‌ ಅವರ ಪುತ್ರ ನಿಶಾಂತ್‌ ಅವರಿಗೆ ಬ್ಲ್ಯಾಕ್‌ ಮೇಲ್‌ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಕ್ಕೆ ಸಂಬಂಧಿ ಸಿದಂತೆ ಉದ್ಯಮಿ ರಾಹುಲ್‌ ಭಟ್‌ ವಿರುದ್ಧ ದಾಖ ಲಾದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

Advertisement

ಪ್ರಕರಣ ಸಂಬಂಧ ತಮ್ಮ ವಿರುದ್ಧ ನಗರದ ಹೆಚ್ಚುವರಿ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಸಲ್ಲಿಕೆಯಾದ ಚಾರ್ಜ್‌ಶೀಟ್‌ ರದ್ದುಗೊಳಿಸುವಂತೆ ಕೋರಿ ಬೆಂಗಳೂರಿನ ಆರ್‌.ಟಿ. ನಗರ ನಿವಾಸಿ ರಾಹುಲ್‌ ಭಟ್‌ ಅರ್ಜಿ ಸಲ್ಲಿಸಿದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.

ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ವೆಂಕಟೇಶ್‌ ದಳವಾಯಿ ವಾದ ಮಂಡಿಸಿ ಅರ್ಜಿದಾರರ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರ ವಿರುದ್ಧ ಮಾಡಲಾ ಗಿರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾಗಿವೆ. ಆದ್ದರಿಂದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು.

ನಿಶಾಂತ್‌ ಅವರ ಅಶ್ಲೀಲ ವಿಡಿಯೋ ತಯಾರಿಸಿ ವಾಟ್ಸಾಪ್‌ ಮೂಲಕ ಕಳುಹಿಸಿ ಆರೋಪಿ ರಾಹುಲ್‌ ಭಟ್‌ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾನೆ. ಹಣ ನೀಡದಿದ್ದರೆ ಅಶ್ಲೀಲ ವಿಡಿಯೋವನ್ನು ಜಾಲತಾಣದಲ್ಲಿ ಮತ್ತು ಮಾಧ್ಯಮಗಳಿಗೆ ಹರಿದುಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಶಾಸಕ ಎಸ್‌. ಟಿ. ಸೋಮಶೇಖರ್‌ ಆಪ್ತ ಸಹಾಯಕ ಸಿಸಿಬಿ ಸೈಬರ್‌ ಕ್ರೈಂ ಠಾಣೆಗೆ ದೂರು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next