Advertisement

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

08:54 PM Sep 19, 2024 | Team Udayavani |

ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಸೆ.27ಕ್ಕೆ ಮುಂದೂಡಿದೆ.

Advertisement

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಬಿ.ಎಸ್‌.ಯಡಿಯೂರಪ್ಪ ಅವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಗುರುವಾರ ವಿಚಾರಣೆಗೆ ಬಂದಿದ್ದವು. ಆಗ ಈ ಪ್ರಕರಣದ ಬಗ್ಗೆ ವಾದ-ಪ್ರತಿವಾದ ಆಲಿಸಲು ಕಾಲಾವಕಾಶಬೇಕು.

ಇಂದು ಸಮಯದ ಅಭಾವ ಇರುವುದರಿಂದ ಮುಂದಿನ ಶುಕ್ರವಾರ (ಸೆ.27) ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿತು.

Advertisement

Udayavani is now on Telegram. Click here to join our channel and stay updated with the latest news.

Next