Advertisement

ಹೈಕೋರ್ಟ್‌ ಸಿಜೆ ನಿಲಯ್‌ ವಿಪಿನ್‌ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

11:34 PM Feb 25, 2024 | Team Udayavani |

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ| ನಿಲಯ್‌ ವಿಪಿನ್‌ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು.

Advertisement

ರವಿವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಗೆಹ್ಲೋಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್‌, ಕೇಂದ್ರ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ , ಸರಕಾರದ ಮುಖ್ಯ ಕಾರ್ಯದರ್ಶಿ ಡಾ| ರಜನೀಶ್‌ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next