Advertisement
ಕರ್ನಾಟಕ ಅಬಕಾರಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪತಿ ನಾರ್ಬರ್ಟ್ ಡಿ’ಸೋಜಾ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಶಾಂತಿ ರೋಚ್ ಅವರನ್ನು ಸಹ ಆರೋಪಿಯನ್ನಾಗಿ ಸೇರಿಸಬೇಕೆಂದು ಕೋರಿ ಪ್ರಕರಣದ ದೂರುದಾರ ಆರ್.ಕೆ. ಭಟ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.
Related Articles
Advertisement
ಚಾರ್ಜ್ ಶೀಟ್ ಸಲ್ಲಿಕೆ ಅನಂತರ ಸೂಕ್ತ ಪುರಾವೆ ಲಭ್ಯವಾದಲ್ಲಿ ಮಾತ್ರ ಸಮನ್ಸ್ ಜಾರಿಗೊಳಿಸಬಹುದಾಗಿದೆ. ಹೀಗಾಗಿ ಸುಖಾಸುಮ್ಮನೆ ಪತ್ನಿಯನ್ನು ಅಪರಾಧ ಜಾಲದೊಳಗೆ ಸಿಲುಕಿಸಲಾಗದು. ಈ ವಿಚಾರ ಸರಿಯಾಗಿ ಅರ್ಥೈಸಿಕೊಳ್ಳದೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ಪ್ರಕರಣದಲ್ಲಿ ನ್ಯಾಯಪೀಠ ಮಧ್ಯ ಪ್ರವೇಶಿಸಲಾಗದು ಎಂದು ಹೇಳಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಏನಿದು ಪ್ರಕರಣ ?ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಿವಾಸಿ ನಾರ್ಬರ್ಟ್ ಎಂಬಾತ ತನ್ನ ಹಿತ್ತಲಿನಲ್ಲಿ ನಕಲಿ ಮದ್ಯ ತಯಾರಿಸಿ ಮಾರಾಟ ಮಾಡುತ್ತಿದ್ದ. ಪೊಲೀಸರು ಆತನ ವಿರುದ್ಧ ಅಬಕಾರಿ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿದ್ದರು. ಅರ್ಜಿದಾರರು ಆರೋಪಿ ನಾರ್ಬರ್ಟ್ ಪತ್ನಿ ಶಾಂತಿ ರೋಚ್ ಕೂಡ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಆಕೆಯ ವಿರುದ್ಧವೂ ಸಮನ್ಸ್ ಜಾರಿಗೊಳಿಸಿ ಪ್ರಕರಣದಲ್ಲಿ ಸಹ ಆರೋಪಿಯನ್ನಾಗಿ ಮಾಡಬೇಕು ಎಂದು ಮನವಿ ಮಾಡಿದ್ದರು. ಈ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.