Advertisement

High Court ನಟ ದರ್ಶನ್‌ಗೆ ಮನೆಯೂಟ 10 ದಿನದಲ್ಲಿ ವರದಿಗೆ ಸೂಚನೆ

10:01 PM Jul 31, 2024 | Team Udayavani |

ಬೆಂಗಳೂರು: ಮನೆ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ನಟ ದರ್ಶನ್‌ ಸಲ್ಲಿಸಿರುವ ಮನವಿಯನ್ನು ಕಾನೂನು ರೀತಿ ಪರಿಶೀಲಿಸಿ 10 ದಿನಗಳಲ್ಲಿ ತೀರ್ಮಾನ ಕೈಗೊಂಡು, ಅದರ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರಕಾರ ಹಾಗೂ ಜೈಲು ಅಧೀಕ್ಷಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ಮನೆ ಊಟ ಪಡೆಯಲು ನಿರ್ದೇಶನ ಕೋರಿದ್ದ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು, ಆಗಸ್ಟ್‌ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next