Advertisement
ಈ ವಿಚಾರವಾಗಿ ಗಿರಿಧರ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಹಾಗೂ ನ್ಯಾ| ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
Related Articles
ದಟ್ಟ ಅರಣ್ಯ ಪ್ರದೇಶಗಳಲ್ಲಿ ರಾತ್ರಿ ವೇಳೆ ರೈಲುಗಳು ವೇಗವಾಗಿ ಸಂಚರಿಸುವುದರಿಂದ ವನ್ಯಪ್ರಾಣಿಗಳಿಗೆ ತೊಂದರೆ ಆಗುತ್ತದೆ. ಅನೇಕ ಪ್ರಕರಣಗಳಲ್ಲಿ ವನ್ಯಪ್ರಾಣಿಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. 2014 ರಿಂದ ಈವರೆಗೆ ಲಭ್ಯವಿರುವ ಮಾಹಿತಿಯಂತೆ ಬೆಳಗಾವಿ, ಧಾರವಾಡ, ದಾಂಡೇಲಿ ಹಾಗೂ ಹಳಿಯಾಳದ ಅರಣ್ಯ ಪ್ರದೇಶಗಳಲ್ಲಿ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ 60ಕ್ಕೂ ಅಧಿಕ ಪ್ರಾಣಿಗಳು ಸಾವನ್ನಪ್ಪಿವೆ. ಇದರಲ್ಲಿ 2 ಆನೆ, 49 ಕಾಡುಕೋಣ ಸೇರಿ ಕರಡಿ, ಕಾಡುನಾಯಿ, ಕಾಡುಹಂದಿಗಳು, ಜಿಂಕೆಗಳು ಮೃತಪಟ್ಟಿವೆ. ರೈಲುಗಳು ವೇಗವಾಗಿ ಸಂಚರಿಸುವುದೇ ಈ ಅಪಘಾತಗಳಿಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
Advertisement
ಅರ್ಜಿದಾರರ ಮನವಿವನ್ಯ ಜೀವಿಗಳಿಗೆ ಹಾನಿಯಾಗಬಾರದೆಂದೇ ಬೆಳಗಾವಿ-ಧಾರವಾಡ ಜಿÇÉೆಗಳ ನಡುವಿನ ರೈಲು ಮಾರ್ಗಕ್ಕೆ ಪರ್ಯಾಯವಾಗಿ ಕಿತ್ತೂರು ಮೂಲಕ ಹಾದು ಹೋಗುವ ಮಾರ್ಗವನ್ನು ರೂಪಿಸಲಾಗಿದೆ. ಆದೇ ರೀತಿ ಹೊಸಪೇಟೆ-ವಾಸ್ಕೋ ಮತ್ತು ಲೋಂಡಾ-ಮೀರಜ್ ಮಾರ್ಗಗಳಿಗೂ ಪರ್ಯಾಯ ಮಾರ್ಗ ರೂಪಿಸಲು ಕ್ರಮ ಕೈಗೊಳ್ಳಲು ರೈಲ್ವೇ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ದೇಶದ ಎಲ್ಲ ದಟ್ಟಾರಣ್ಯಗಳಲ್ಲಿ ರೈಲುಗಳ ವೇಗವನ್ನು ಕಡಿತಗೊಳಿಸಬೇಕೆಂದು 2013ರಲ್ಲಿ ರೈಲ್ವೆ ಇಲಾಖೆಗೆ ಆದೇಶ ನೀಡಿದ್ದು, ವೇಗ ಕಡಿಮೆ ಮಾಡದಿದ್ದರೆ ಚಾಲಕರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆದೇಶಿಸಿದೆ. ಆದರೆ ಆದೇಶ ಪಾಲನೆಯಾಗಿಲ್ಲ. ಹೊಸಪೇಟೆ-ವಾಸ್ಕೋ ಹಾಗೂ ಲೋಂಡಾ-ಮೀರಜ್ ಮಾರ್ಗದಲ್ಲಿ ರೈಲು ಡಿಕ್ಕಿ ಹೊಡೆದು ಪ್ರಾಣಿಗಳು ಸಾವನ್ನಪ್ಪದಂತೆ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ. ಈ ಮೂಲಕ ಅರಣ್ಯ ಇಲಾಖೆ ವನ್ಯ ಜೀವಿಗಳನ್ನು ಸಂರಕ್ಷಿಸಬೇಕೆನ್ನುವ ಸಂವಿಧಾನದ ವಿಧಿ 48(ಎ) ಹೇಳಿರುವ ಮೂಲಭೂತ ಕರ್ತವ್ಯವನ್ನು ಉಲ್ಲಂ ಸಿದೆ