Advertisement

ಕುಲಪತಿ ಹುದ್ದೆಗಾಗಿ ಹೈ ಮೊರೆ

11:38 AM Jun 23, 2018 | Team Udayavani |

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಗೆ ತಮ್ಮನ್ನು ಪರಿಗಣಿಸುವಂತೆ ಕೋರಿ ಬೆಂಗಳೂರು ವಿಶ್ವವಿದ್ಯಾಲಯದ ಜೀವರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ.ಎನ್‌.ರಾಮಚಂದ್ರಸ್ವಾಮಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. 

Advertisement

ಶುಕ್ರವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್‌.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಕಾಲೇಜು ಉಪನ್ಯಾಸಕ ವೃತ್ತಿಯಲ್ಲಿ ದಶಕಗಳ ಅನುಭವ ಹೊಂದಿರುವ ಜತೆಗೆ ಈ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಪ್ರಮುಖ ಹುದ್ದೆಗಳನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ.

ವೃತ್ತಿ ಜೀವನದಲ್ಲಿ ತಮ್ಮ ವಿರುದ್ಧ ಯಾವುದೇ ರೀತಿಯ ಆರೋಪಗಳಿಲ್ಲ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಮತ್ತಷ್ಟು ಸೇವೆ ಸಲ್ಲಿಸುವ ಇಚ್ಛೆ ಹೊಂದಿರುವ ತಮ್ಮನ್ನು ಮೈಸೂರು ಅಥವಾ ಬೆಂಗಳೂರು ವಿಶ್ವವಿದ್ಯಾಲಯಗಳಿಗೆ ಕುಲಪತಿ ಹುದ್ದೆಗೆ ಪರಿಗಣಿಸಲು ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ರಾಮಚಂದ್ರಸ್ವಾಮಿ ಅರ್ಜಿಯಲ್ಲಿ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next