ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ ನೀಡಿದೆ.
ಈ ಬಗ್ಗೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಇದನ್ನೂ ಓದಿ:ಜುಲೈ 31ರೊಳಗೆ CBSE 12ನೇ ತರಗತಿ ಫಲಿತಾಂಶ ಪ್ರಕಟ: 10, 11ನೇ ತರಗತಿ ಫಲಿತಾಂಶ ಪರಿಗಣನೆ
ರಿಪೀಟರ್ಸ್ ಗೆ ಪರೀಕ್ಷೆ ನಡೆಸುವ ಬಗ್ಗೆ ಆಕ್ಷೇಪಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆ ವರದಿ ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ಸೂಚನೆ ನೀಡಿತ್ತು. ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿದೆ. 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಮತ್ತು 76 ಸಾವಿರ ರಿಪೀಟರ್ಸ್ ಗಳ ಫಲಿತಾಂಶದ ಬಗ್ಗೆ ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ.
15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದೆ. ಈ ತೀರ್ಮಾನದವರೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.