Advertisement

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

07:24 PM Aug 26, 2022 | Team Udayavani |

ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ರಾಜ್ಯ ಸರಕಾರಕ್ಕೆ ಶುಕ್ರವಾರ ಅನುಮತಿ ನೀಡಿದೆ.ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಹೈಕೋರ್ಟ್ ಈ ತೀರ್ಪು ನೀಡಿದೆ.

Advertisement

ನಿನ್ನೆ , ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ, ವಕ್ಫ್ ಮಂಡಳಿ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠ, ಮೈದಾನವನ್ನು ಆಟದ ಬಳಕೆಗಷ್ಟೇ ಸೀಮಿತಗೊಳಿಸಬೇಕು ಹಾಗೂ ರಮ್ಜಾನ್‌ ಮತ್ತು ಬಕ್ರೀದ್‌ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಸಮುದಾಯಕ್ಕೆ ಅವಕಾಶ ಕಲ್ಪಿಸಬೇಕು. ಈ ಎರಡು ದಿನ ಹೊರತುಪಡಿಸಿ ಮತ್ಯಾವುದೇ ದಿನ ಪ್ರಾರ್ಥನೆಗೆ ಅವಕಾಶವಿಲ್ಲ ಮಧ್ಯಂತರ ಆದೇಶ ನೀಡಿತ್ತು.

ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ

ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಈ ವರ್ಷದ ನವೆಂಬರ್ 1 ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುವುದು ಎಂದು ಸಚಿವ ಆರ್‌.ಅಶೋಕ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಚಾಮರಾಜಪೇಟೆಯ ಮೈದಾನದ ಸಂಬಂಧ ಕೋರ್ಟ್ ತೀರ್ಪು ಸಂತಸ ತಂದಿದೆ.ಇಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ತಿಳಿಸಿದರು.

Advertisement

ಈ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ವೇಳೆ ಧ್ವಜ ಹಾರಿಸಲು ಕೂಡ ಅವಕಾಶ ಇರಲಿ.ಇದೀಗ ಕೋರ್ಟ್ ಕಂದಾಯ ಇಲಾಖೆಗೆ ನೀಡಿದೆ.ಹೀಗಾಗಿ ಕಂದಾಯ ಇಲಾಖೆ ಅಲ್ಲಿ ಅದ್ಧೂರಿಯಾಗಿ ಕನ್ನಡ ರಾಜೋತ್ಸವ ಆಚರಿಸಲು ಜಾಗ ನೀಡಲಿದೆ ಎಂದು ಹೇಳಿದರು.

ತೀರ್ಪು ಸ್ವಾಗತಾರ್ಹ

ಹಿಂದೂಗಳ ಧಾರ್ಮಿಕ ಆಚರಣೆ ಸ್ವಾತಂತ್ರ್ಯ ಯಾರೊಬ್ಬರ ಬಳಿ ಕೇಳಿ ಪಡೆಯುವ ಭಿಕ್ಷೆ ಅಲ್ಲ ಅದು ಜನ್ಮ ಸಿದ್ದ ಹಕ್ಕು ಅನ್ನೋದನ್ನು ಇಂದಿನ ತೀರ್ಪು ಎತ್ತಿ ಹಿಡಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಕಂದಾಯ ಇಲಾಖೆಗೆ ಸೇರಿದ್ದ ಆಟದ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಸಮಿತಿಗಳಿಗೆ ಅನುಮತಿ ನೀಡಲು ನಾನು ಈಗಾಗಲೇ ಘನ ಸರಕಾರಕ್ಕೆ ಪತ್ರ ಬರೆದಿದ್ದು ಅದು ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕೂಡಾ ಆಗಿತ್ತು. ಇಂದಿನ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಆ ನಿಟ್ಟಿನಲ್ಲೇ ಇದೆ .ಆಟದ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿನ್ನೆ ಹೈಕೋರ್ಟ್ ನ ಏಕ ಸದಸ್ಯ ಪೀಠ ನೀಡಿದ್ದ ತೀರ್ಪಿನಿಂದ ನಿರಾಶರಾಗಿದ್ದ ನಮಗೆ ಇಂದಿನ ತೀರ್ಪು ಮತ್ತೊಮ್ಮೆ ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಿದೆ ಮತ್ತು ಸಂತಸ ತಂದಿದೆ.
ಗಣೇಶೋತ್ಸವ ಆಚರಣೆಯ ಹಿಂದಿನ ಉದ್ದೇಶ ಸಮಾಜದ ಏಕತೆ. ಇದನ್ನು ಅರ್ಥ ಮಾಡಿಕೊಳ್ಳದ ಮತಾಂಧ ಶಕ್ತಿಗಳಿಗೆ ದೇಶ ಭಕ್ತಿಯ ಸದಾಚಾರ ,ಸದ್ಬುದ್ಧಿ ಕೊಡಲೆಂದು ವಿಘ್ನ ವಿನಾಶಕನಲ್ಲಿ ಪ್ರಾರ್ಥಿಸೋಣ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next