Advertisement

RSS Leader ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ

10:50 PM Jul 10, 2024 | Team Udayavani |

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

Advertisement

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಿಬೇಕು ಎಂದು ಕೋರಿ ಡಾ. ಪ್ರಭಾಕರ್‌ ಭಟ್‌ ಕಲ್ಲಡ್ಕ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎಫ್ಐಆರ್‌ ಹಾಗೂ ಸ್ಥಳೀಯ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಾಂತರ ತಡೆ ನೀಡಿ ಆದೇಶಿಸಿದೆ.

ಅರ್ಜಿದಾರ ಪ್ರಭಾಕರ್‌ ಭಟ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್‌ ಶ್ಯಾಮ್‌, ಘಟನೆ ನಡೆದು ಎರಡು ದಿನಗಳ ಬಳಿಕ ವಿಳಂಬವಾಗಿ ದೂರು ದಾಖಲಿಸಲಾಗಿದೆ. ಇದೊಂದು ರಾಜಕೀಯ ದುರುದ್ದೇಶದಿಂದ ದಾಖಲಿಸಿಕೊಳ್ಳಲಾದ ಪ್ರಕರಣವಾಗಿದೆ. ನ್ಯಾಯಾಲಯದ ಅನುಮತಿ ಪಡೆದುಕೊಳ್ಳದೆ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಅರ್ಜಿದಾರರು ಕಾನೂನು ಪಾಲಕ ನಾಗರಿಕರಾಗಿದ್ದು, ದೂರುದಾರರು ಆರೋಪಿಸಿದಂತಹ ತಪ್ಪು ಅವರು ಎಸಗಿಲ್ಲ. ಆದ್ದರಿಂದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು. ಅದರಂತೆ ಮಧ್ಯಾಂತರ ತಡೆ ನೀಡಿದೆ.

ಪ್ರಕರಣದ ಹಿನ್ನೆಲೆ
2023ರ ಡಿ. 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಭಾಷಣ ಮಾಡಿದ್ದ ಡಾ.ಪ್ರಭಾಕರ ಭಟ್‌, ಮುಸ್ಲಿಂ ಮಹಿಳೆಯರಿಗೆ ಶಾಶ್ವತ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಶಾಶ್ವತ ಗಂಡ ಕೊಟ್ಟಿದ್ದು ಮೋದಿ ಎಂದು ಹೇಳಿದ್ದರು ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ 2023ರ ಡಿ. 26ರಂದು ದೂರು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next