Advertisement

ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ

12:06 AM Feb 11, 2023 | Team Udayavani |

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತವರ ಕುಟುಂಬದ ಸದಸ್ಯರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

Advertisement

ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯು ನ್ಯಾ| ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದು, ಪ್ರಕರಣದ ತನಿಖೆಗೆ ಫೆ.24ರವರೆಗೆ ತಡೆ ನೀಡಿತು.

ಅಲ್ಲದೆ, ಈವರೆಗಿನ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next