Advertisement

ಅಧಿಸೂಚನೆಯ ದಾಖಲೆ ಕೇಳಿದ ಹೈಕೋರ್ಟ್‌

12:05 PM Oct 24, 2017 | Team Udayavani |

ಬೆಂಗಳೂರು: ದೊಡ್ಡತೇಗೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯ್ತಿ ವ್ಯಾಪ್ತಿಗೆ ಸೇರಿಸಿ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

Advertisement

ಸೂಕ್ತ ನಿಯಮಗಳನ್ನು ಪಾಲಿಸದೇ ಪಟ್ಟಣ ಪಂಚಾಯತ್‌ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ರಾಜ್ಯ ಸರ್ಕಾರದ ಅಧಿಸೂಚನೆ ರದ್ದುಕೋರಿ ದೊಡ್ಡತೇಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ  ಬಿ.ಕೆ ಅನಿಲ್‌ ಕುಮಾರ್‌ ಹಾಗೂ ಇತರರು  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಸೋಮವಾರ ಅರ್ಜಿ ವಿಚಾರಣೆ ನಡೆಸಿದ  ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ದೊಡ್ಡತೇಗೂರು ಗ್ರಾ.ಪಂಚಾಯಿತಿಯನ್ನು ಪಟ್ಟಣ ಪಂಚಾಯತ್‌ ವ್ಯಾಪ್ತಿಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಪಾಲಿಸಿರುವ ಕಾನೂನು ನಿಯಯಗಳು ಹಾಗೂ ಅಧಿಕೃತವಾಗಿ ರಾಜ್ಯಪಾಲರ ಒಪ್ಪಿಗೆ ಪಡೆದಿರುವ ಸಂಬಂಧದ ದಾಖಲೆಗಳನ್ನು ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚನೆ ನೀಡಿ ಅಕ್ಟೋಬರ್‌ 30ಕ್ಕೆ ವಿಚಾರಣೆ ಮುಂದೂಡಿತು.

ರಾಜ್ಯ ಪೌರಾಡಳಿತ ಕಾಯಿದೆ ಕಲಂ 9ರ ಅನ್ವಯ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆ  ಮಾಡುವ ಮುನ್ನ  ಸಂಬಂಧಪಟ್ಟ ಪ್ರದೇಶದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಲುವಾಗಿ ಮಾಹಿತಿ ಪತ್ರಗಳನ್ನು ಅಂಟಿಸಬೇಕು. ಬಳಿಕ ಸ್ಥಳೀಯರಿಂದ ಆಕ್ಷೇಪಣೆಗಳನ್ನು ಸ್ವೀಕರಿಸಿ ರಾಜ್ಯಪಾಲರಿಗೆ ವರದಿ ನೀಡಬೇಕು. ರಾಜ್ಯಪಾಲರು ಒಪ್ಪಿಗೆ ನೀಡಿದ ಬಳಿಕವಷ್ಟೆ ಅಧಿಸೂಚನೆ ಹೊರಡಿಸಬೇಕು. ಈ ನಿಯಮಗಳನ್ನು ರಾಜ್ಯ ಸರ್ಕಾರ ಉಲ್ಲಂ ಸಿದೆ ಎಂಬುದು ಅರ್ಜಿದಾರರ ವಾದವಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next