Advertisement

ಸರ್ಕಾರದ ನಿಲುವು ಕೇಳಿದ ಹೈಕೋರ್ಟ್‌

01:47 PM Aug 14, 2021 | Team Udayavani |

ಬೆಂಗಳೂರು: ನಗರದಲ್ಲಿ ಆಗಾಗ ನಡೆಯುವ ಪ್ರತಿಭಟನೆ, ಧರಣಿಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಬಗ್ಗೆ ಎರಡು ವಾರಗಳಲ್ಲಿ ನಿಲುವು ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

Advertisement

ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆ ಕುರಿತು ಹೈಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ಕುಮಾರ್‌ ಬರೆದಿದ್ದ ಪತ್ರ ಆಧರಿಸಿ ರಿಜಿಸ್ಟ್ರಾರ್‌ ಜನರಲ್‌ ದಾಖಲಿಸಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ನೇತೃತ್ವದ ವಿಭಾಗೀಯ ನ್ಯಾಯ ಪೀಠ  ವಿಚಾರಣೆ ನಡೆಸಿತು.

ಇದನ್ನೂ ಓದಿ:ಎಸ್.ನಾರಾಯಣ ಆ್ಯಕ್ಷನ್ ಕಟ್ ಗೆ HDK ಬಂಡವಾಳ | ಮತ್ತೊಮ್ಮೆ ಒಂದಾದ ಹಿಟ್ ಸಿನಿಮಾಗಳ ಸರದಾರರು

ಪ್ರತಿಭಟನೆಗಳನ್ನು ನಿಯಂತ್ರಿಸಲು ಸರ್ಕಾರ ಯಾವ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ನ್ಯಾಯಪೀಠ ಪ್ರಶ್ನಿಸಿತು. ಸರ್ಕಾರದ ಪರ ವಕೀಲರು,
ಈ ವಿಚಾರದಲ್ಲಿ ನಿಲುವು ತಿಳಿಸಲು ಎರಡು ವಾರಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು. ಅದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ, ಪ್ರತಿಭಟನೆ ಹಾಗೂ ಧರಣಿಗಳಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನು ಬಗೆಹರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ
ನಿಲವು ತಿಳಿಸುವಂತೆ ಕಳೆದ ವಿಚಾರಣೆ ವೇಳೆಯೇ ಸರ್ಕಾರಕ್ಕೆ ಸೂಚಿಸಿಲಾಗಿತ್ತು. ಆದರೆ, ಈವರೆಗೂ ಸರ್ಕಾರ ಪ್ರತಿಕ್ರಿಯಿಸಿಲ್ಲ. ಅರ್ಜಿಯಲ್ಲಿ
ಪ್ರತಿವಾದಿಗಳಾಗಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿತು

Advertisement

Udayavani is now on Telegram. Click here to join our channel and stay updated with the latest news.

Next