Advertisement

High court: ಅಕ್ರಮ ಮದ್ಯ ವಶ ಪ್ರಕರಣ:ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

08:54 PM Sep 18, 2024 | Team Udayavani |

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ 98 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡ ಸಂಬಂಧ ಚಾಮರಾಜನಗರ ಲೋಕಸಭಾ ಕ್ಷೇತ್ರದ ನಂಜನಗೂಡು ವ್ಯಾಪ್ತಿಯ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್‌ ಬ್ರೇವರಿಸ್‌ ಲಿಮಿಟೆಡ್‌ ವಿರುದ್ಧ ಅಬಕಾರಿ ಇಲಾಖೆ ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದ ತೀರ್ಪನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

Advertisement

ಅಬಕಾರಿ ಅಧಿಕಾರಿಗಳು ನಂಜನಗೂಡು ಪೊಲೀಸ್‌ ಠಾಣೆಯಲ್ಲಿ ದಾಖಲಿಸಿರುವ ಎಫ್ಐಆರ್‌ ಹಾಗೂ ಅದರ ಸಂಬಂಧ ನಂಜನಗೂಡು ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಯುನೈಟೆಡ್‌ ಬ್ರೇವರಿಸ್‌ ಲಿಮಿಟೆಡ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸುವುದಾಗಿ ಹೇಳಿತು. ತೀರ್ಪು ಪ್ರಕಟವಾಗುವ ತನಕ ಪ್ರಕರಣಕ್ಕೆ ತಡೆ ನೀಡಲಾಗುವುದು. ಆದರೆ, ಅಬಕಾರಿ ಅಧಿಕಾರಿಗಳ ವಿರುದ್ಧ ನಡೆಯುತ್ತಿರುವ ಪ್ರಕರಣಕ್ಕೆ ತಡೆ ಇರುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರೆ, ಪ್ರಾಸಿಕ್ಯೂಷನ್‌ ಪರ ಹೆಚ್ಚುವರಿ ಎಸ್‌ಪಿಪಿ ಬಿ.ಎನ್‌. ಜಗದೀಶ್‌ ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next