Advertisement

High Court: ರಾಷ್ಟ್ರದ ಹಿತಾಸಕ್ತಿ ಎದುರು ವ್ಯಕ್ತಿ ಸ್ವಾತಂತ್ರ್ಯಕ್ಕಿಲ್ಲ ಮನ್ನಣೆ

01:34 AM Oct 02, 2024 | Esha Prasanna |

ಬೆಂಗಳೂರು: ದೇಶಕ್ಕಿಂತ ವ್ಯಕ್ತಿ ದೊಡ್ಡವನಲ್ಲ. ರಾಷ್ಟ್ರದ ಸಾರ್ವಭೌಮತ್ವ, ಏಕತೆ, ಸಮಗ್ರತೆ ಹಾಗೂ ಹಿತಾಸಕ್ತಿಗೆ ಸವಾಲು ಎದುರಾದಾಗ ವ್ಯಕ್ತಿ ಸ್ವಾತಂತ್ರ್ಯಕ್ಕೆ ಮನ್ನಣೆ ನೀಡಲಾಗದು ಎಂದು ಹೈಕೋರ್ಟ್‌ ಪ್ರತಿಪಾದಿಸಿದೆ.

Advertisement

ನಿಷೇಧಿತ ಇಸ್ಲಾಮಿಕ್‌ ಸ್ಟೇಟ್ಸ್‌ (ಐಸಿಸ್‌) ಸಂಘಟನೆ ಪ್ರೇರಣೆಯೊಂದಿಗೆ ಉಗ್ರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದಲ್ಲಿ ಬಂಧಿತನಾಗಿರುವ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಯುವಕ ಅರಫಾತ್‌ ಅಲಿ ಅಲಿಯಾಸ್‌ ಅರಾಫಾತ್‌ ಜಾಮೀನು ಕೋರಿ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಹಾಗೂ ನ್ಯಾ| ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ತನ್ನ ಆದೇಶದಲ್ಲಿ ಈ ಪ್ರತಿಪಾದನೆ ಮಾಡಿದೆ.

ಅಲ್ಲದೆ ಆರೋಪಿಯ ಜಾಮೀನು ಅರ್ಜಿ ವಜಾಗೊಳಿ ಸಿದ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್‌, ಆರೋಪಿಯ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ಜುಲೈ 25ರಂದು ಕಾದಿರಿಸಿದ್ದ ತೀರ್ಪನ್ನು ವಿಭಾಗೀಯ ನ್ಯಾಯಪೀಠ ಇತ್ತೀಚೆಗೆ ಪ್ರಕಟಿಸಿದೆ.

21ನೇ ವಿಧಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ್ದಾಗಿದ್ದು ಕಾನೂನಿನ ಸರಿಯಾದ ಪ್ರಕ್ರಿಯೆಇಲ್ಲದೆ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ಮೊಟಕುಗೊಳಿಸಲು ಅವಕಾಶವಿಲ್ಲ. ಆದರೆ ರಾಷ್ಟ್ರೀಯ ಹಿತಾಸಕ್ತಿ ಒಳ ಗೊಂಡಾಗ ಅಥವಾ ರಾಷ್ಟ್ರದ ಏಕತೆ, ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಸವಾಲನ್ನು ಒಡ್ಡಿದಾಗ, ವೈಯಕ್ತಿಕ ಸ್ವಾತಂತ್ರ್ಯ  ಮನ್ನಣೆ ಕಳೆದುಕೊಳ್ಳುತ್ತದೆ ಎಂದು ನ್ಯಾಯಪೀಠ ಹೇಳಿದೆ.

ಅಲ್ಲದೆ ಸೂಕ್ತ ಕಾನೂನಿನ ಅಡಿ ಯಲ್ಲಿ ನಿಯಮಗಳನ್ನು ಪಾಲಿಸದೆ ಬಂಧಿಸಿದ ಸಂದರ್ಭದಲ್ಲಿ ಸಂವಿಧಾನದ ಅನುಚ್ಛೇದ 21ರ ಅಡಿಯಲ್ಲಿ ವ್ಯಕ್ತಿ ಸ್ವಾತಂತ್ರ್ಯ ದಡಿ ಹಕ್ಕು ಪಡೆ ಯಲು ಹೋರಾಡಬಹುದಾಗಿದೆ. ಆದರೆ ಅಪರಾಧದ ಆರೋಪ ದಲ್ಲಿ ಬಂಧನಕ್ಕೊಳಗಾಗಿದ್ದಲ್ಲಿ ಅದನ್ನು ಕಾನೂನಿನ ಅಡಿಯಲ್ಲಿ ಪರಿಗಣಿಸಬೇಕಾಗಿದ್ದು ವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನಡಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿರುವ ನ್ಯಾಯಪೀಠ, ಇದಕ್ಕೆ ಸಮರ್ಥನೆಯಾಗಿ ಸುಪ್ರೀಂಕೋರ್ಟ್‌ನ ಹಲವು ತೀರ್ಪು ಗಳನ್ನು ಉಲ್ಲೇಖೀಸಿದೆ. ನ್ಯಾಯ ಪೀಠ ವಿವರಿಸಿದೆ.

Advertisement

ಪ್ರಕರಣದಲ್ಲಿ ಸಾಕ್ಷಿಯಾಗಿರುವ ಮತ್ತೂಬ್ಬ ಆರೋಪಿ, ಮ್ಯಾಜಿ ಸ್ಟ್ರೇಟ್‌ ನ್ಯಾಯಾಲಯದ ಮುಂದೆ, ಮೇಲ್ಮನವಿದಾರನಿಂದ (ಅರಫಾತ್‌ ಅಲಿ) ಪ್ರಭಾವ ಕ್ಕೊಳಗಾಗಿದ್ದೇನೆ. ಆತ ಭಾರತದಲ್ಲಿ ಐಸಿಸ್‌ ಸಿದ್ಧಾಂತಗಳನ್ನು ಜಾರಿ ಮಾಡುವುದಕ್ಕಾಗಿ ಪ್ರಯತ್ನ ಮಾಡಿದ್ದಾನೆ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಮೇಲ್ಮನವಿದಾರನ ವಿರುದ್ಧದ ಸಾಕ್ಷ್ಯಧಾರಗಳನ್ನು ಪರಿಶೀಲಿಸಿದಲ್ಲಿ ಅವರ ವಿರುದ್ಧದ ಆರೋಪಗಳು ಸಾಬೀತುಪಡಿಸುತ್ತವೆ. ಹೀಗಾಗಿ ಕಾನೂನ ಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆಯ ಸೆಕ್ಷನ್‌ 43ಡಿ ಅಡಿಯಲ್ಲಿ ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿದೆ ಎಂದು ತಿಳಿಸಿರುವ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿ ಮೇಲ್ಮನವಿ ವಜಾಗೊಳಿಸಿದೆ.

ಹೈಕೋರ್ಟ್‌ಗೆ ದಸರಾ ರಜೆ: ಅ. 14ರಿಂದ ಕಲಾಪ
ಬೆಂಗಳೂರು: ಹೈಕೋರ್ಟಿನ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ಅಕ್ಟೋಬರ್‌ 3ರಿಂದ 10ರ ವರೆಗೆ ದಸರಾ ರಜೆ ಇರಲಿದೆ. ಆದರೆ ಅ. 2ರಂದು ಗಾಂಧಿ ಜಯಂತಿ, ಅ. 11 ವಿಜಯದಶಮಿ, ಅ. 12 ಎರಡನೇ ಶನಿವಾರ, ಅ. 13 ವವಿವಾರ ರಜೆ ಇರುವುದರಿಂದ ಅ. 14ರಿಂದ ಕಲಾಪಗಳು ಪುನರಾರಂಭ ಆಗಲಿವೆ. ತುರ್ತು ಪ್ರಕರಣಗಳ ವಿಚಾರಣೆಗೆ ಅ. 4 ಮತ್ತು 9ರಂದು ಬೆಂಗಳೂರು, ಧಾರವಾಡ, ಕಲಬುರಗಿ ಪೀಠಗಳಲ್ಲಿ ತಲಾ ಒಂದು ವಿಭಾಗೀಯ ನ್ಯಾಯಪೀಠ ಹಾಗೂ 2 ಏಕಸದಸ್ಯ ನ್ಯಾಯ ಪೀಠಗಳ ಕಲಾಪ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next