Advertisement
ವಿಧಾನಸಭಾ ಚುನಾವಣಾ ನೀತಿ ಸಂಹಿತೆಯಿಂದ ಸ್ಥಗಿತಗೊಂಡಿದ್ದ ವರ್ಗಾವಣೆ ಪ್ರಕ್ರಿಯೆಗೆ ಮರು ಚಾಲನೆ ನೀಡುವಂತೆ ಶಿಕ್ಷಣ ಸಚಿವರು ಸೂಚಿಸಿದ್ದರು. ಅದರಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜೂ.18ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ಬೇಕಾದ ವೇಳಾಪಟ್ಟಿಯನ್ನು ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ಮಧ್ಯೆ, ಕೆಲ ಶಿಕ್ಷಕರು ವರ್ಗಾವಣೆ ಪ್ರಕ್ರಿಯೆಯನ್ನು ನಡೆಸದಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಶಿಕ್ಷಕರ ವರ್ಗಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
Advertisement
ಶಿಕ್ಷಕರ ವರ್ಗಾವಣೆಗೆ ಹೈಕೋರ್ಟ್ ಮಧ್ಯಂತರ ತಡೆ
06:00 AM Jun 19, 2018 | |
Advertisement
Udayavani is now on Telegram. Click here to join our channel and stay updated with the latest news.