Advertisement

Chakravarti Sulibele ವಿರುದ್ದ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

08:30 PM Nov 16, 2023 | Team Udayavani |

ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಧಾರವಾಡದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

Advertisement

ಅಕ್ಟೋಬರ್ 3 ರಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ ಮತ್ತು ಅವರು ಮುಸ್ಲಿಮರನ್ನು ಬೆಂಬಲಿಸುವವರೆಗೂ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಆರೋಪಿಸಿದ್ದರು.

ಹೀಗಾಗಿ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಅ. 5 ರಂದು ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.
ಸೂಲಿಬೆಲೆ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ನ್ನು ರದ್ದುಪಡಿಸುವಂತೆ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಶಿವಶಂಕರ ಅಮರಣ್ಣನವರ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next