Advertisement

High Court ಕೆ. ನಾಗಣ್ಣ ಗೌಡ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ

10:15 PM Nov 20, 2023 | Team Udayavani |

ಬೆಂಗಳೂರು: ಕೇಂದ್ರ ಸರಕಾರ ಅಧಿಸೂಚಿತ ಸಂಸ್ಥೆಗಳಿಗೆ, ಹುದ್ದೆಗಳ ನೇಮಕಕ್ಕೆ ಆಯ್ಕೆ ಸಮಿತಿ ರಚನೆ ಮಾಡಿರುವಾಗ ಅಂಥ ಹುದ್ದೆಗೆ ಯಾರು ಅರ್ಹರು ಎಂದು ನ್ಯಾಯಾಲಯಗಳು ನಿರ್ಧರಿಸಲಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷರ ಹುದ್ದೆಗೆ ಕೆ. ನಾಗಣ್ಣ ಗೌಡ ಅವರನ್ನು ನೇಮಿಸಿದ್ದ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.

Advertisement

ನಾಗಣ್ಣ ಗೌಡರ ನೇಮಕವನ್ನು ರದ್ದುಗೊಳಿಸಿ ಹೊಸದಾಗಿ ನೇಮಕ ಪ್ರಕ್ರಿಯೆ ನಡೆಸುವಂತೆ ಕೋರಿ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅಧ್ಯಕ್ಷರ ಹುದ್ದೆಯ ಆಕಾಂಕ್ಷಿಯಾಗಿದ್ದ ವಕೀಲ ಆಶೋಕ್‌ ಡಿ.ಸನಾದಿ ಎಂಬವರು ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಸರಕಾರದ ನೇಮಕಾತಿಗಳನ್ನು ನ್ಯಾಯಿಕ ಪರಾಮರ್ಶೆ ಮಾಡುವ ಸಂದರ್ಭದಲ್ಲಿ ನ್ಯಾಯಾಲಯವು ಆಯ್ಕೆ ಸಮಿತಿ ಹಾಗೂ ಮೇಲ್ಮನವಿ ನ್ಯಾಯಾಧಿಕರಣದಂತೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ನ್ಯಾಯಾಲಯಗಳು ಎಲ್ಲ ಸಂದರ್ಭದಲ್ಲಿ ತಮ್ಮ ವಿವೇಚನಾಧಿಕಾರ ಬಳಸುವುದಕ್ಕೆ ಸಾಧ್ಯವಿಲ್ಲ. ಆದರೆ ಸರಕಾರದ ನೇಮಕಾತಿಯು ಕಾನೂನಿನ ಉಲ್ಲಂಘನೆ ಅಥವಾ ನಿರಂಕುಶತೆಯಿಂದ ಕೂಡಿದ್ದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಬಹುದಾಗಿದೆ ಎಂದು ಪೀಠ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next