Advertisement

HighCourt; “ನಾಯಕರಿಗೆ ಮಾತಿನ ಮೇಲೆ ಹಿಡಿತ ಇರಲಿ’

01:28 AM Jul 20, 2024 | Team Udayavani |

ಬೆಂಗಳೂರು: ಸಮಾಜದಲ್ಲಿ ಜನರು ಬಳಸುವ ಭಾಷೆಯ ಘನತೆ ಕುಸಿದರೆ ಅದು ನಾಗರಿಕತೆಯ ಅವಸಾನದ ಸಂಕೇತ. ಜನನಾಯಕರಾದವರು ತಮ್ಮ ಮಾತುಗಳ ಮೇಲೆ ಹಿಡಿತ ಹೊಂದಿರಬೇಕು. ಇಂಥವರನ್ನು ಕಂಡೇ ಕನಕದಾಸರು “ನಾಲಗೆ ಕುಲವ ಅರುಹಿತು’ ಎಂದು ಹೇಳಿದ್ದಾರೆ.

Advertisement

ಇದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ನಿಂದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ಭರತ್‌ ಶೆಟ್ಟಿ ಅವರ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌ ವ್ಯಕ್ತಪಡಿಸಿದ ಅಭಿಪ್ರಾಯ.
ತಮ್ಮ ವಿರುದ್ಧ ಮಂಗಳೂರಿನ ಕಾವೂರು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಡಾ| ಭರತ್‌ ಶೆಟ್ಟಿ ಸಲ್ಲಿಸಿದ್ದ ಅರ್ಜಿಯು  ಶುಕ್ರವಾರ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ಬಳಿಕ ಜನಪ್ರತಿನಿಧಿಗಳು ತಾವು ಆಡುವ ಮಾತಿನ ಮೇಲೆ ಹಿಡಿತ ಇಟ್ಟುಕೊಂಡಿರಬೇಕು. ಭಾಷೆಯನ್ನು ಯಾವತ್ತೂ ಸುಂದರವಾಗಿ, ಮೃದುವಾಗಿ ಬಳಸಬೇಕು ಎಂದು ನ್ಯಾಯಪೀಠ ಸೂಕ್ಷ್ಮವಾಗಿ ಹೇಳಿತು.

ಅಂತಿಮವಾಗಿ ರಾಜ್ಯ ಸರಕಾರ ಹಾಗೂ ದೂರುದಾರರಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಪೀಠ, ಶಾಸಕ ಭರತ್‌ ಶೆಟ್ಟಿ ವಿರುದ್ಧದ ಜನನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಾಂತರ ತಡೆ ನೀಡಿ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next