Advertisement
ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಕಾಲೇಜಿನ ವ್ಯಾನ್ ಚಾಲಕನನ್ನು ಪ್ರೇಮ ವಿವಾಹವಾದ ಪ್ರಕರಣದಲ್ಲಿ ಮಗಳನ್ನು ತಮ್ಮ ವಶಕ್ಕೆ ಒಪ್ಪಿಸಬೇಕು ಎಂದು ಕೋರಿ ವಿದ್ಯಾರ್ಥಿನಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಮಾತನ್ನು ಹೇಳಿತು.
Related Articles
ಪ್ರಕರಣದ ವಿಚಾರಣೆ ವೇಳೆ ಪೋಷಕರ ಅಳಲು ಕೇಳಿದ ನ್ಯಾಯಮೂರ್ತಿಗಳು, ಹೆತ್ತವರಿಗಿಂತ ದೊಡ್ಡ ದೇವರಿಲ್ಲ. ಸಹಾನುಭೂತಿಗಿಂತ ದೊಡ್ಡ ಧರ್ಮವಿಲ್ಲ. ಜನ್ಮ ನೀಡಿ ಬೆಳೆಸಿದ ತಂದೆ-ತಾಯಿಯ ಋಣ ತೀರಿಸಲು ಅಸಾಧ್ಯ ಎಂದರು.
Advertisement
ಪಾಸ್‌ಪೋರ್ಟ್: ಮಧ್ಯಾಂತರ ತಡೆ
ಬೆಂಗಳೂರು: ಕ್ರಿಮಿನಲ್ ವಿಚಾರಣೆ ಪ್ರಕ್ರಿಯೆಗೆ ಹೈಕೋರ್ಟ್ ತಡೆ ಯಾಜ್ಞೆ ನೀಡಿದ್ದರೆ, ಪಾಸ್‌ಪೋರ್ಟ್ ನವೀಕರಣಕ್ಕೆ ವಿಚಾರಣ ನ್ಯಾಯಾಲಯದ ಅನುಮತಿ ಅಗತ್ಯವಿಲ್ಲ ಎನ್ನುವ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಮಧ್ಯಾಂತರ ತಡೆ ನೀಡಿದೆ. ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ತಡೆ ನೀಡಿತು.